ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆಯಿಂದಾಗಿ ಬಿಜೆಪಿಯ ಯಾರೊಬ್ಬರೂ ಪ್ರಾಣ ಕಳೆದುಕೊಂಡಿಲ್ಲ: ಸಿದ್ದರಾಮಯ್ಯ

Published 21 ಮೇ 2023, 8:03 IST
Last Updated 21 ಮೇ 2023, 8:03 IST
ಅಕ್ಷರ ಗಾತ್ರ

ಬೆಂಗಳೂರು: ಭಯೋತ್ಪಾದನೆಯಿಂದಾಗಿ ಬಿಜೆಪಿಯ ಯಾರೊಬ್ಬರೂ ಪ್ರಾಣ ಕಳೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾತನಾಡಿದ ಅವರು, ‘ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಅವರು ಸುಖಾಸುಮ್ಮನೆ ಮಾತನಾಡುತ್ತಾರೆ. ಆದರೆ, ಭಯೋತ್ಪಾದನೆಯಿಂದಾಗಿ ಬಿಜೆಪಿಯ ಯಾರೊಬ್ಬರೂ ಪ್ರಾಣ ಕಳೆದುಕೊಂಡಿಲ್ಲ. ಆದರೆ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂತಹ ಅನೇಕ ಕಾಂಗ್ರೆಸ್ ನಾಯಕರು ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಬಿಜೆಪಿಯೇತರ ಕೆಲವು ನಾಯಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT