ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ

Published 1 ಜೂನ್ 2024, 6:55 IST
Last Updated 1 ಜೂನ್ 2024, 6:55 IST
ಅಕ್ಷರ ಗಾತ್ರ

ಬೆಂಗಳೂರು: 'ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ' ಎಂದರು.

ನಾವು ಕಾನೂನು ಪಾಲಕರು

ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾದ ಮುಖ್ಯಮಂತ್ರಿ ಈ ಬಗ್ಗೆ ಪ್ರತಿಕ್ರಿಯಿಸಿ, 'ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ' ಎಂದರು.

'ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ' ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT