ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಾಂಧಿ ವಿಚಾರಧಾರೆ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Published : 31 ಆಗಸ್ಟ್ 2024, 16:18 IST
Last Updated : 31 ಆಗಸ್ಟ್ 2024, 16:18 IST
ಫಾಲೋ ಮಾಡಿ
Comments

ಬೆಂಗಳೂರು: ‘ಇಡೀ ವಿಶ್ವಕ್ಕೆ ಗಾಂಧೀಜಿಯವರ ಪ್ರಸ್ತುತತೆ ಹೆಚ್ಚುತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಎಐಸಿಸಿ ಅಧಿವೇಶನದ (1924) ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿರು.

‍‘ಈ ತಲೆಮಾರಿನ ಯುವ ಸಮೂಹಕ್ಕೆ ಮಹಾತ್ಮ ಗಾಂಧಿಯವರ ವಿಚಾರಗಳನ್ನು ಹೆಚ್ಚೆಚ್ಚು ತಲುಪಿಸಬೇಕಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಗಾಂಧಿಯ ವಿಚಾರಗಳು ಹೆಚ್ಚೆಚ್ಚು ಬೇರು ಬಿಡಬೇಕು. ಅದಕ್ಕೆ ತಕ್ಕಂತೆ ಇಡೀ ವರ್ಷ ಕಾರ್ಯಕ್ರಮಗಳನ್ನು ರೂಪಿಸುವುದು ಒಳ್ಳೆಯದು’ ಎಂದು ಸಲಹೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ವೀರಪ್ಪ ಮೊಯಿಲಿ, ಸಚಿವರಾದ ಎಚ್.ಕೆ.ಪಾಟೀಲ, ಕೆ.ಎಚ್. ಮುನಿಯಪ್ಪ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಬಿ.ಎಲ್. ಶಂಕರ್ ಸೇರಿದಂತೆ ಹಲವು ಪ್ರಮುಖರು ಮತ್ತು ಶತಮಾನೋತ್ಸವ ಆಚರಣೆ ಸಮಿತಿಯ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT