ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಡಾಳ್‌ ಲಂಚ ಪ್ರಕರಣದಿಂದ‌ ಪಕ್ಷಕ್ಕೆ ಹಿನ್ನಡೆಯಿಲ್ಲ: ಶೆಟ್ಟರ್

Last Updated 5 ಮಾರ್ಚ್ 2023, 6:24 IST
ಅಕ್ಷರ ಗಾತ್ರ

ಕಲಬುರಗಿ: ಟೆಂಡರ್ ಅಂತಿಮಗೊಳಿಸಲು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚದ ಹಣ ಪಡೆದಿರುವ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ಹಿನ್ನಡೆ ಆಗುವುದಿಲ್ಲ ‌ಎಂದು ಶಾಸಕ, ಬಿಜೆಪಿ ‌ವಿಜಯ ಸಂಕಲ್ಪ ಮೂರನೇ ತಂಡದ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು.

ನಗರದಲ್ಲಿ ವಿಜಯ ಸಂಕಲ್ಪ ಯಾತ್ರೆ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಅಪರಾಧಿಯಾಗಿದ್ದಾರೆ. ಆದ್ದರಿಂದಲೇ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಲಿಲ್ಲ. ಲೋಕಾಯುಕ್ತ ಸಂಸ್ಥೆ ಇದ್ದರೆ ತಾವು ಸಿಕ್ಕಿ ಹಾಕಿಕೊಳ್ಳಬಹುದು ಎಂಬ ಭೀತಿಯಿಂದ ಲೋಕಾಯುಕ್ತ ರದ್ದುಗೊಳಿಸಿ ತಮ್ಮ ನೇರ ನಿಯಂತ್ರಣದಲ್ಲಿರುವ ಎಸಿಬಿಯನ್ನು ರಚಿಸಿದರು. ಈಗ ನಾವು ಲೋಕಾಯುಕ್ತ ಸಂಸ್ಥೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಮರು ಸ್ಥಾಪಿಸಿದ್ದೇವೆ. ಜೊತೆಗೆ ಸ್ವಾಯತ್ತತೆಯನ್ನೂ ನೀಡಿದ್ದೇವೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ ಎಂದರು.

ರಾಜ್ಯದಲ್ಲಿ ಪಕ್ಷಕ್ಕೆ ಸಾಕಷ್ಟು ಜನಬೆಂಬಲ ವ್ಯಕ್ತವಾಗುತ್ತಿದ್ದು, ಈ ಬಾರಿ ಬಿಜೆಪಿ ಯಾರ ಹಂಗಿಗೂ ಬೀಳದೇ 130ರಿಂದ 140 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸಲಿದೆ ಎಂದರು.

ಕಲ್ಯಾಣ ‌ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ‌ಪ್ರದೇಶ ಅಭಿವೃದ್ಧಿ ಮಂಡಳಿಗೆ ₹ 5000 ಕೋಟಿ ಅನುದಾನ ಘೋಷಿಸಿದೆ ಎಂದರು.

'ರೈಲ್ವೆ ವಿಭಾಗ ಕಲಬುರಗಿಯಲ್ಲಿ ಆಗಲೇಬೇಕು'
ಕಲಬುರಗಿಯಲ್ಲಿ ರೈಲ್ವೆ ವಿಭಾಗ ಆಗಬೇಕು ‌ಎಂದು ಸುರೇಶ ಅಂಗಡಿ ಅವರು ರೈಲ್ವೆ ಸಚಿವರಾಗಿದ್ದಾಗ ಸಂಕಲ್ಪ ಮಾಡಿದ್ದರು. ಅವರ ಸಾವಿನ ಬಳಿಕ ಕಾರಣಾಂತರಗಳಿಂದ ನನೆಗುದಿಗೆ ಬಿದ್ದಿದೆ. ಇಲ್ಲಿ ರೈಲ್ವೆ ವಿಭಾಗ ಆಗಬೇಕು ಎಂಬ ಇಲ್ಲಿನ ಜನರ ಬೇಡಿಕೆಗೆ ನನ್ನ ‌ಸಹಮತ ಇದೆ ಎಂದು ಶೆಟ್ಟರ್ ತಿಳಿಸಿದರು.

ಕೇಂದ್ರ ರಸಗೊಬ್ಬರ, ರಾಸಾಯನಿಕ ಹಾಗೂ ‌ನವೀಕರಿಸಹುದಾದ ಇಂಧನ ಮೂಲಗಳ ಖಾತೆ ರಾಜ್ಯ ಸಚಿವ ಭಗವಂತ ‌ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷ ‌ಮಾಲೀಕಯ್ಯ ಗುತ್ತೇದಾರ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಸುನೀಲ ವಲ್ಯಾಪುರ, ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ‌ ಪಾಟೀಲ, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT