ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ಲಕ್ಷ ಡೋಸ್ ಕೋವಿಶೀಲ್ಡ್, 5 ಲಕ್ಷ ಡೋಸ್ ಕಾರ್ಬೆವಾಕ್ಸ್‌ ಲಸಿಕೆಗೆ ರಾಜ್ಯ ಮನವಿ

Last Updated 28 ಡಿಸೆಂಬರ್ 2022, 2:20 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾದ ರೂಪಾಂತರ ತಳಿ ಬಿಎಫ್‌–7 ಆತಂಕದಿಂದಾಗಿ ಬೂಸ್ಟರ್ ಡೋಸ್ ಲಸಿಕೆಗೆ ಬೇಡಿಕೆ ಹೆಚ್ಚಿದೆ.

ಈ ಹಿನ್ನೆಲೆಯಲ್ಲಿ 25 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು ಐದು ಲಕ್ಷ ಡೋಸ್ ಕಾರ್ಬೆವಾಕ್ಸ್‌ ಲಸಿಕೆಗಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಕಳೆದ ವಾರ ಮನವಿ ಸಲ್ಲಿಸಿದೆ. ಜನವರಿ ಅಂತ್ಯದ ವೇಳೆಗೆ ಬೂಸ್ಟರ್ ಡೋಸ್ ವ್ಯಾಪ್ತಿಯನ್ನು ಶೇಕಡ 20ರಿಂದ 50ಕ್ಕೆ ಹೆಚ್ಚಿಸಲು ರಾಜ್ಯ ಸಜ್ಜಾಗಿದೆ. ಆದರೆ, ರಾಜ್ಯದ ಮನವಿಗೆ ಕೇಂದ್ರದಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಪ್ರಸ್ತುತ, ರಾಜ್ಯದಲ್ಲಿ ಕೋವಿಶೀಲ್ಡ್ ಅಥವಾ ಕಾರ್ಬೆವಾಕ್ಸ್ ಲಸಿಕೆಯ ದಾಸ್ತಾನು ಇಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ (ಇಮ್ಯುನೈಸೇಶನ್) ಡಾ ರಜಿನಿ ಹೇಳಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ 8.4 ಲಕ್ಷ ಡೋಸ್ ಕೋವ್ಯಾಕ್ಸಿನ್ ಮಾತ್ರ ಇದೆ. ಅವುಗಳ ಅವಧಿ ಜನವರಿ, ಫೆಬ್ರವರಿಯಲ್ಲಿ ಮುಗಿಯುವ ಕಾರಣ ಲಸಿಕೆಗಳನ್ನು ಫಲಾನುಭವಿಗಳಿಗೆ ಶೀಘ್ರದಲ್ಲೇ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್‌) ಜಿಲ್ಲಾ ಮಟ್ಟದ ಅಧಿಕಾರಿಗಳು ಲಸಿಕೆಗಳ ಉಸ್ತುವಾರಿ ವಹಿಸುತ್ತಾರೆ ಎಂದು ಡಾ ರಜಿನಿ ಹೇಳಿದರು.

‘ಕೋವ್ಯಾಕ್ಸಿನ್ ಅನ್ನು ಮುಖ್ಯವಾಗಿ ನಗರ ಪ್ರದೇಶಗಳು ಮತ್ತು ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಜನರು ಹೆಚ್ಚಾಗಿ ಹಾಕಿಸಿಕೊಂಡಿದ್ದಾರೆ. ಆದ್ದರಿಂದ ಅವರು ಈಗ ಬೂಸ್ಟರ್ ಡೋಸ್ ಅನ್ನು ತೆಗೆದುಕೊಳ್ಳಬಹುದು. ಫಲಾನುಭವಿಗಳ ಪಟ್ಟಿಯನ್ನು (ಬೂಸ್ಟರ್ ಅಥವಾ ಎರಡನೇ ಡೋಸ್‌ಗಾಗಿ) ಡೌನ್‌ಲೋಡ್ ಮಾಡಿಕೊಳ್ಳಲು ನಾವು ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳಿಗೆ ತಿಳಿಸಿದ್ದೇವೆ’ ಎಂದು ಅವರು ಹೇಳಿದರು.

ಈ ಮಧ್ಯೆ, ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್‌ಗೆ ಬೇಡಿಕೆ ಹೆಚ್ಚುತ್ತಿದೆ. ಡಿಸೆಂಬರ್ ಆರಂಭದವರೆಗೆ ಲಸಿಕೆ ಹಾಕಿಸಿಕೊಳ್ಳಲು ಬರುತ್ತಿದ್ದ ಕೆಲವೇ ಕೆಲವು ಜನರು ಲಸಿಕೆಗಾಗಿ ಬರುತ್ತಿದ್ದರು. ಈ ವಾರದಿಂದ ಪ್ರತಿದಿನ ಸುಮಾರು 100 ಜನರು ಬೂಸ್ಟರ್ ಡೋಸ್‌ಗಳನ್ನು ಪಡೆಯುತ್ತಿದ್ದಾರೆ ಎಂದು ಜಯನಗರದ ಅಪೋಲೋ ಆಸ್ಪತ್ರೆಯ ಮುಖ್ಯಸ್ಥ ಡಾ.ಯತೀಶ್ ಗೋವಿಂದಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT