‘ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ಹಾಗೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ನಿತ್ಯ ಮೂರು– ನಾಲ್ಕು ಪ್ರಶ್ನೆ ಕೇಳುತ್ತೇವೆ. ಅವರು ಉತ್ತರ ನೀಡಲಿ. ಬಳಿಕ ನಾವು ರಾಜ್ಯ ಮಟ್ಟದ ಜನಾಂದೋಲನದ ಬಗ್ಗೆ ಆಲೋಚನೆ ಮಾಡುತ್ತೇವೆ. ಜೆಡಿಎಸ್ ಪಕ್ಷದವರನ್ನು ಹೆದರಿಸಿ, ಬೆದರಿಸಿ ಪಾದಯಾತ್ರೆಗೆ ಒಪ್ಪಿಸಿದ್ದಾರೆ. ಅವರ ಒಪ್ಪಿಗೆಯ ಗುಟ್ಟು ಏನು ಎಂದು ಅವರನ್ನೇ ಕೇಳಿ’ ಎಂದು ಹೇಳಿದರು.