ಬೆಂಗಳೂರು: ‘ಸಿದ್ದರಾಮಯ್ಯ ಅವರ ಜತೆ ನಾನು ಯಾವುದೇ ರೀತಿ ಪೈಪೋಟಿ ನಡೆಸುವುದಿಲ್ಲ’ ಎಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ಪಕ್ಷವೇ ಒಂದು ಶಕ್ತಿ. ನಾನು ಅಧ್ಯಕ್ಷ ಹುದ್ದೆಯಲ್ಲಿದ್ದರೆ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದಾರೆ. ಅವರ ಹಿರಿತನ ಹಾಗೂ ಅನುಭವವನ್ನು ನಾನು ಸಂಪೂರ್ಣವಾಗಿ ಗೌರವಿಸುತ್ತೇನೆ’ ಎಂದಿದ್ದಾರೆ.

ಈ ಟ್ವೀಟ್ ರಾಜಕೀಯವಾಗಿ ಚರ್ಚೆಗೆ ಆಸ್ಪದವಾಗಿದೆ. ಕೊರೊನಾ ಸೋಂಕು ನಿವಾರಣೆಗೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ ವರಿಗೆ ಪರಿಹಾರ ವಿತರಣೆಯಲ್ಲಿನ ಲೋಪ ಟೀಕಿಸುವ ವೇಳೆ ಈ ಇಬ್ಬರು ಮುಖಂಡರ ಮಧ್ಯೆ ಪೈಪೋಟಿ ಇದ್ದಂತೆ ಕಂಡುಬಂದಿತ್ತು. ಸಿದ್ದರಾಮಯ್ಯ ಈ ಹಿಂದೆಯೇ ‘ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಪೈಪೋಟಿ ಇಲ್ಲ. ನಾವು ಒಟ್ಟಾಗಿಯೇ ಕೆಲಸ ಮಾಡು ತ್ತಿದ್ದೇವೆ’ ಎಂದಿದ್ದರು. ಈಗ ಶಿವ ಕುಮಾರ್ ಕೂಡ ಸ್ಪಷ್ಟನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.