ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿ ಕೊಡದಿರಲು ಕಾಂಗ್ರೆಸ್‌ ನಾಟಕ: ಕಾರಜೋಳ

Published 19 ಜನವರಿ 2024, 16:12 IST
Last Updated 19 ಜನವರಿ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಒಳ ಮೀಸಲಾತಿ ಜಾರಿ ಗೊಳಿಸಲು ಇಚ್ಛೆ ಇರದ ರಾಜ್ಯದ ಕಾಂಗ್ರೆಸ್‌ ಸರ್ಕಾರ ನಾಟಕ ಮಾಡುತ್ತಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಟೀಕಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಮೀಸಲಾತಿಯ ಅನ್ಯಾಯ ಸರಿಪಡಿಸಲಾಗುವುದು ಎಂದು ಚುನಾವಣೆ ಸಮಯದಲ್ಲಿ ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದ ನಂತರ ವರಸೆ ಬದಲಾಯಿಸಿದರು. ಅಧಿಕಾರಕ್ಕೆ ಬಂದ ಎಂಟು ತಿಂಗಳ ಬಳಿಕ, ಲೋಕಸಭಾ ಚುನಾವಣೆಯಲ್ಲಿ ಸಮುದಾಯಗಳ ದಾರಿ ತಪ್ಪಿಸಲು 341ನೇ ವಿಧಿ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ 2012ರಲ್ಲಿ ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು. ನಂತರ 2020ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ತಿದ್ದುಪಡಿ ಅಗತ್ಯವೇ ಇಲ್ಲ. ಒಳ ಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಹೆಚ್ಚುವರಿ ಸೇರಿಸಲು ಅಥವಾ ಇರುವ ಜಾತಿಗಳನ್ನು ತೆಗೆಯಲು ಅವಕಾಶ ಇಲ್ಲ ಎಂದು  ನ್ಯಾಯಮೂರ್ತಿ ಅರುಣ್‌ ಕುಮಾರ್‌ ಮಿಶ್ರಾ ತೀರ್ಪಿನಲ್ಲಿ ಹೇಳಿದ್ದರು. ಹಾಗಿದ್ದರೂ, ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT