ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್‌ಗೂ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್

Published 30 ಮಾರ್ಚ್ 2024, 15:35 IST
Last Updated 30 ಮಾರ್ಚ್ 2024, 15:35 IST
ಅಕ್ಷರ ಗಾತ್ರ

ಬೆಂಗಳೂರು: ‘ಆದಾಯ ತೆರಿಗೆ (ಐ.ಟಿ) ಇಲಾಖೆಯಿಂದ ಶುಕ್ರವಾರ ರಾತ್ರಿ ನನಗೂ ನೋಟಿಸ್ ಬಂದಿದೆ. ಅದೂ ಈಗಾಗಲೇ ಬಗೆಹರಿದ ವಿಚಾರಕ್ಕೆ ಬಂದಿದೆ. ಇದರಿಂದ ಆಘಾತವಾಗಿದೆ. ಕೇವಲ ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿ ನಾಯಕರ ಮೇಲೂ ತನಿಖೆ ನಡೆಯುತ್ತಿದೆ. ಆದರೆ, ಅವರನ್ನು ವಿಚಾರಣೆಗೆ ಕರೆಯುವುದಿಲ್ಲ’ ಎಂದು ಆರೋಪಿಸಿದರು.

‘ದೇಶದಲ್ಲಿ ಪ್ರಜಾಪ್ರಭುತ್ವ, ಕಾನೂನು ಇದೆ. ಅದನ್ನು ಹರಾಜು ಹಾಕುತ್ತಿದ್ದಾರೆ. ಅಧಿಕಾರಿಗಳಿಗೆ ಬಿಜೆಪಿ ಸರ್ಕಾರ ಇಂತಹ ಸೂಚನೆ ನೀಡುತ್ತಿದೆ. ಅಧಿಕಾರ ಸೇರಿ ಯಾವುದು ಶಾಶ್ವತವಲ್ಲ. ವಿರೋಧಪಕ್ಷಗಳನ್ನು ಏಕೆ ಗುರಿ ಮಾಡಲಾಗುತ್ತಿದೆ’ ಎಂದೂ ಪ್ರಶ್ನಿಸಿದರು.

‘ಇಂಡಿಯಾ’ ಮೈತ್ರಿಕೂಟವನ್ನು ಗುರಿ ಮಾಡಲಾಗಿದೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಎನ್‌ಡಿಎ ಮೈತ್ರಿಕೂಟ ಹತಾಶೆಯಾಗಿದೆ.  ಎನ್‌ಡಿಎ ಸೋಲಿಸಲು ‘ಇಂಡಿಯಾ’ ಹೊರಟಿದೆ. ಹೀಗಾಗಿ, ಭಯ ಹುಟ್ಟಿಸಲು ಇಂತಹ ಯತ್ನಗಳು ನಡೆಯುತ್ತಿದೆ’ ಎಂದೂ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT