ಬೆಂಗಳೂರು: ಅತಿಥಿ ಉಪನ್ಯಾಸಕರ ಗೌರವಧನ ಪಾವತಿಗೆ ಬಿಡುಗಡೆ ಮಾಡಿದ್ದ ಅನುದಾನ ಬಳಕೆ ಮಾಡದ 95 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

2019 ಡಿಸೆಂಬರ್‌ನಿಂದ 2020ರ ಮಾರ್ಚ್‌ವರೆಗಿನ ಅವಧಿಯಲ್ಲಿ 23 ದಿನಗಳ ಗೌರವ ಧನವನ್ನು ಬಿಡುಗಡೆ ಮಾಡಲಾಗಿತ್ತು. ಹಣ ಬಳಕೆಯಾದ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಪ್ರಾಂಶುಪಾಲರುಗಳಿಗೆ ಸೂಚಿಸಲಾಗಿತ್ತು. ಆದರೆ, 95 ಕಾಲೇಜುಗಳ ಪ್ರಾಂಶುಪಾಲರು ಬಳಕೆ ಪ್ರಮಾಣ ಪತ್ರ ಸಲ್ಲಿಸಿಲ್ಲ. ಅಲ್ಲದೆ, ಖಜಾನೆಯಲ್ಲಿ ₹ 61.52 ಲಕ್ಷ ಬಳಕೆಯಾಗದೆ ಉಳಿದಿದೆ.

ವೆಚ್ಚ ಮಾಡಿದ ಬಗ್ಗೆ ಬಳಕೆ ಪ್ರಮಾಣ ಪತ್ರವನ್ನಾಗಲಿ, ಉಳಿಕೆ ಅನುದಾನವನ್ನು ಬಳಕೆ ಪ್ರಮಾಣ ಪತ್ರದ ಜೊತೆ ಮರು ಒಪ್ಪಿಸದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ನೋಟಿಸ್ ನೀಡಲಾಗಿದ್ದು, ಮೂರು ದಿನಗಳ ಒಳಗೆ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ. ಉತ್ತರ ನೀಡದೇ ಇದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ನೋಟಿಸ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.