ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಯಾನ ಟೀಕೆ: ಉಪನ್ಯಾಸಕ ಮೂರ್ತಿಗೆ ನೋಟಿಸ್‌

Published 19 ಜುಲೈ 2023, 20:13 IST
Last Updated 19 ಜುಲೈ 2023, 20:13 IST
ಅಕ್ಷರ ಗಾತ್ರ

ಬೆಂಗಳೂರು: ಚಂದ್ರಯಾನ-3 ಯೋಜನೆಯನ್ನು ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪದ ಮೇಲೆ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಹುಲಿಕುಂಟೆ ಮೂರ್ತಿ ಅವರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೋಟಿಸ್‌ ನೀಡಿದೆ.

ಚಂದ್ರಯಾನಕ್ಕೂ ಮೊದಲು ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ್ದ ವಿಜ್ಞಾನಿಗಳ ಧೋರಣೆಯನ್ನು ಖಂಡಿಸಿದ್ದ ಮೂರ್ತಿ ’ಚಂದ್ರಯಾನಕ್ಕೆ ತಿರುಪತಿ ನಾಮ’ ಎಂದು ಟೀಕಿಸಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಎಸ್‌.ಸುರೇಶ್‌ ಕುಮಾರ್ ಶಾಲಾ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದರು. 

‘ವಿವರಣೆ ಕೇಳಿ ನೋಟಿಸ್‌ ನೀಡಲಾಗಿದೆ. ಉತ್ತರ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಫಾಲಾಕ್ಷಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಬೆದರಿಕೆ, 30 ಜನರ ವಿರುದ್ಧ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದ ಮೂರ್ತಿ ಹಾಗೂ ಅವರ ಪತ್ನಿ ವಿರುದ್ಧ ಹಲವರು ಅವಾಚ್ಯವಾಗಿ ಟೀಕೆ ಮಾಡಿದ್ದು, ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ಮೂರ್ತಿ ದೂರಿದ್ದಾರೆ. 30 ಜನರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT