ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಗೊಂಡಿರುವ ಹೊರಗುತ್ತಿಗೆ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆರ್ಥಿಕ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಅನುಮತಿ ಪಡೆಯದೆ ಬಹುತೇಕ ವಿಶ್ವವಿದ್ಯಾಲಯಗಳು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಂಡಿವೆ. ಹೀಗೆ ನೇಮಕವಾದವರು ಕಾಯಂಗೊಳಿಸುವಂತೆ ಒತ್ತಡ ಹಾಕುತ್ತಿದ್ದಾರೆ. ವಿಶ್ವವಿದ್ಯಾಲಯ ಕಾಯ್ದೆ ಹಾಗೂ ಕೋರ್ಟ್ ಆದೇಶಗಳ ಪ್ರಕಾರ ಕಾಯಂ ಮಾಡಲು ಅವಕಾಶವಿಲ್ಲ. ಹಾಗಾಗಿ, ಹೆಚ್ಚುವರಿ ಇರುವ ದ್ವಿತೀಯ ದರ್ಜೆ ಸಹಾಯಕರು, ಬೆರಳಚ್ಚುಗಾರರು, ವಾಹನ ಚಾಲಕರು ಹಾಗೂ ಇತರೆ ಸಿಬ್ಬಂದಿಯನ್ನು ಬಿಡುಗಡೆ ಮಾಡಬೇಕು ಎಂದು ಸೂಚಿಸಲಾಗಿದೆ.
ಇಲಾಖೆ ಹಲವು ಬಾರಿ ಸೂಚನೆ ನೀಡಿದ್ದರೂ, ಹೆಚ್ಚುವರಿ ಸಿಬ್ಬಂದಿ ಮುಂದುವರಿದಿದ್ದಾರೆ. ತಕ್ಷಣ ಅವರನ್ನು ಬಿಡುಗಡೆ ಮಾಡದಿದ್ದರೆ ಕುಲಪತಿ, ಕುಲಸಚಿವರು ಮತ್ತು ಹಣಕಾಸು ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.