ಹೊಸಪೇಟೆ: ಹೊಸಪೇಟೆ ಜಿಲ್ಲಾ ಕೇಂದ್ರವಾಗಿ ಇಟ್ಟುಕೊಂಡು ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

ನೂತನ ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಹಾಗೂ ಹರಪನಹಳ್ಳಿ ಸೇರಲಿವೆ. ಇನ್ನು ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ಬಳ್ಳಾರಿ, ಕುರುಗೋಡು, ಸಿರುಗುಪ್ಪ, ಕಂಪ್ಲಿ ಹಾಗೂ ಸಂಡೂರು ಸೇರಿಸಿ ಜಿಲ್ಲೆಯ ಸರಹದ್ದು ಗೊತ್ತು ಮಾಡಿದೆ.

ಈ ಸಂಬಂಧ ಯಾವುದೇ ರೀತಿಯ ಆಕ್ಷೇಪಣೆ, ಸಲಹೆಗಳಿದ್ದರೆ ಒಂದು ತಿಂಗಳ ಒಳಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ 505, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ, ಬೆಂಗಳೂರು–560001 ಈ ವಿಳಾಸಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.