ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ಇನ್ನು ಮುಂದೆ ಅನಿವಾಸಿ ಭಾರತೀಯರಿಗೆ (ಎನ್ಆರ್ಐ) ಶೇ 15ರಷ್ಟು ಸೀಟುಗಳನ್ನು ಮೀಸಲಿಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, 2025-26ನೇ ಸಾಲಿನಿಂದಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಆದೇಶ ಹೊರಡಿಸಿದೆ. 400 ಸರ್ಕಾರಿ ಕಾಲೇಜುಗಳಿಗೆ ಸಿಕ್ಕಿವೆ. ಈ ವರ್ಷ ಹೊಸ 400 ಸೀಟುಗಳಲ್ಲಿ ಎನ್ಆರ್ಐ ಕೋಟಾ ನಿಗದಿಪಡಿಸಲಾಗಿದೆ. ₹25 ಲಕ್ಷ ಶುಲ್ಕ ನಿಗದಿಮಾಡಲಾಗಿದೆ. ಇದರಿಂದ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಸರ್ಕಾರದ ಅನುದಾನದ ಮೇಲೆ ಹೆಚ್ಚು ಅವಲಂಬಿತವಾಗದೆ ಸ್ವಾವಲಂಬನೆ ಪಡೆಯಲು ನೆರವಾಗಲಿದೆ ಎಂದರು.

ಕರ್ನಾಟಕದಲ್ಲಿ ಪ್ರತಿ ವರ್ಷ ವೈದ್ಯಕೀಯ ಶಿಕ್ಷಣಕ್ಕೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲವು ಪ್ರತಿಭಾವಂತ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಿಗೆ ಅಧಿಕ ಶುಲ್ಕ ಕಟ್ಟಿ ಪ್ರವೇಶ ಪಡೆಯಲು ಸಾಧ್ಯವಾಗುತ್ತಿಲ್ಲ. ಹೆಚ್ಚುವರಿಯಾಗಿ ವೈದ್ಯಕೀಯ ಸೀಟುಗಳಿಂದಾಗಿ ಪ್ರತಿಭಾವಂತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ನ.4ರಿಂದ ಕೌಶಲ ಶೃಂಗಸಭೆ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಮಾದರಿಯಲ್ಲಿ ಇದೇ ನವೆಂಬರ್ 4 5 ಮತ್ತು 6ರಂದು ಕೌಶಲ ಶೃಂಗಸಭೆ ಆಯೋಜಿಸಲಾಗುತ್ತದೆ. ದಸರಾ ಬಳಿಕ ಮೈಸೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಶರಣ ಪ್ರಕಾಶ ಪಾಟೀಲ ಹೇಳಿದರು. ‘ನೋಂದಣಿ ಕಾರ್ಯ ಶೀಘ್ರ ಆರಂಭವಾಗಲಿದೆ. ಪೋಸ್ಟರ್ ಬಿಡುಗಡೆ ಮಾಡಿದ್ದೇವೆ. ಅಕ್ಟೋಬರ್ನಲ್ಲಿ ನರ್ಸಿಂಗ್ ಶೃಂಗಸಭೆಯನ್ನೂ ಆಯೋಜಿಸುತ್ತಿದ್ದೇವೆ. ನಂತರ ವಿದೇಶದಲ್ಲಿ ರೋಡ್ ಶೋ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ಆದ್ಯತೆ ನೀಡುತ್ತೇವೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.