ಬೆಂಗಳೂರು: ‘ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಉದ್ಯೋಗಿಗಳಲ್ಲಿ ಕೌಶಲ ಅಭಿವೃದ್ಧಿಪಡಿಸುವ ಸಲುವಾಗಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ಕಾರ್ಪೊರೇಷನ್ನ (ಎನ್ಎಸ್ಐಸಿ) ಶಾಖೆ ಆರಂಭಿಸಲಾಗುತ್ತದೆ. ಇದು ದಕ್ಷಿಣ ಭಾರತದಲ್ಲೇ ಮೊದಲ ಎನ್ಎಸ್ಐಸಿ ಶಾಖೆಯಾಗಲಿದೆ’ ಎಂದು ಕೇಂದ್ರ ಎಂಎಸ್ಎಂಇ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದಲ್ಲಿ ಶನಿವಾರ, ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ‘ದಲಿತ ಉದ್ದಿಮೆದಾರರ ಸಮಾವೇಶ’ ಮತ್ತು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಸಂವಾದ ಕಾರ್ಯಕ್ರಮ, ಎರಡರಲ್ಲೂ ಈ ವಿಷಯವನ್ನು ಅವರು ಪ್ರಸ್ತಾಪಿಸಿದರು.

‘ಎಂಎಸ್ಎಂಇಗಳೇ ತುಂಬಿರುವ ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಎಸ್ಐಸಿ ಶಾಖೆ ಆರಂಭಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಇದಕ್ಕಾಗಿ ಜಾಗ ನೀಡುವಂತೆ ರಾಜ್ಯ ಸರ್ಕಾರವನ್ನು ಕೇಳಿದ್ದೇನೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಈ ವಿಷಯ ಪ್ರಸ್ತಾಪಿಸಿದ್ದೇನೆ. ಮುಂದಿನ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಉದ್ಯೋಗಿಗಳಲ್ಲಿ ಕೆಲಸ ನಿರ್ವಹಣೆ, ಕೈಗಾರಿಕೆ ನಿರ್ವಹಣೆ, ಮಾರುಕಟ್ಟೆ ವಿಸ್ತರಣೆ ಮತ್ತು ತಂತ್ರಜ್ಞಾನ ಅಳವಡಿಕೆಯಂತಹ ಕೌಶಲ ವೃದ್ಧಿಸುವ ತರಬೇತಿಯನ್ನು ದೆಹಲಿಯ ಎನ್ಎಸ್ಐಸಿ ಮಾಡುತ್ತದೆ. ದಕ್ಷಿಣ ಭಾರತದಲ್ಲೂ ಅಂತಹ ಸಂಸ್ಥೆಯ ಅಗತ್ಯ ಇದೆ. ಇದಕ್ಕೆ ಬೆಂಗಳೂರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದರು.

‘ಪಿಎಫ್ ಕಚೇರಿಯಲ್ಲಿ ಅನ್ಯಭಾಷಿಕರೇ ತುಂಬಿದ್ದಾರೆ’

‘ರಾಜ್ಯದಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಕಚೇರಿಗಳಲ್ಲಿ ಅನ್ಯಭಾಷಿಕರೇ ತುಂಬಿದ್ದಾರೆ. ಅನ್ಯಭಾಷಿಕರ ಜತೆಗೆ ವ್ಯವಹರಿಸುವುದು ರಾಜ್ಯದ ಬಡ ಕಾರ್ಮಿಕರಿಗೆ ಕಷ್ಟವಾಗುತ್ತಿದೆ. ಇದನ್ನು ಸರಿಪಡಿಸಬೇಕು’ ಎಂದು ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್ ಅವರು ಶೋಭಾ ಕರಂದ್ಲಾಜೆ ಅವರನ್ನು ಒತ್ತಾಯಿಸಿದರು. ರಾಜ್ಯದಲ್ಲಿ ಎಂಎಸ್ಎಂಇಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಪತ್ರವನ್ನು ಅವರು ಶೋಭಾ ಅವರಿಗೆ ಸಲ್ಲಿಸಿದರು. ‘ಕೇಂದ್ರ ಸರ್ಕಾರದ ಇಪಿಎಫ್ಒ ಮಂಡಳಿಯಲ್ಲಿ ಕಾಸಿಯಾಗೆ ಮೊದಲು ಸದಸ್ಯತ್ವ ಇತ್ತು. ಅದನ್ನು ಈಗ ತೆಗೆದುಹಾಕಲಾಗಿದೆ. ಮತ್ತೆ ಸದಸ್ಯತ್ವ ನೀಡಬೇಕು. ಸಣ್ಣ ಕೈಗಾರಿಕೆಗಳು ಸೌರ ವಿದ್ಯುತ್ ಘಟಕಗಳನ್ನು ಸ್ಥಾಪಿಸಲು ಸಹಾಯಧನ ಒದಗಿಸಬೇಕು ಪಿಎಫ್ ಕಚೇರಿಗಳಲ್ಲಿನ ಹಳೆಯ ಕಂಪ್ಯೂಟರ್ ಮತ್ತು ತಂತ್ರಾಂಶಗಳನ್ನು ಮೇಲ್ದರ್ಜೆಗೆ ಏರಿಸಬೇಕು ಸುಲಭವಾಗಿ ಸಾಲ ದೊರೆಯುವಂತ ವ್ಯವಸ್ಥೆ ಮಾಡಬೇಕು ಮತ್ತು ಪ್ರತ್ಯೇಕ ಎಂಎಸ್ಎಂಇ ನೀತಿ ರೂಪಿಸಬೇಕು’ ಎಂದು ಮನವಿ ಸಲ್ಲಿಸಿದರು. ‘ಇವುಗಳನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಸಚಿವೆ ಶೋಭಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.