ಬೆಂಗಳೂರು: ‘ರಾಜ್ಯದ ಬಹುತೇಕ ಎಲ್ಲ ನರ್ಸಿಂಗ್ ಕಾಲೇಜುಗಳಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚುವರಿ ಶುಲ್ಕವನ್ನು ವಸೂಲು ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ‘ವಾಪ್ಸಿ’ (ವೆಲ್ಫೇರ್ ಅಸೋಸಿಯೇಷನ್ ಆಫ್ ಪ್ರೊಫೆಷನಲ್ ಸ್ಕಾಲರ್ಸ್ ಇನ್ ಇಂಡಿಯಾ) ಅಧ್ಯಕ್ಷರಾಗಿರುವ ಕೊಟ್ಟಾಯಂನ ಸಾಮಾಜಿಕ ಕಾರ್ಯಕರ್ತ ಎಂ.ಕೆ.ಥಾಮಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜೀವಗಾಂಧಿ ಆರೋಗ್ಯ ವಿವಿ ರಿಜಿಸ್ಟ್ರಾರ್, ಕರ್ನಾಟಕ ನರ್ಸಿಂಗ್ ಕೌನ್ಸಿಲ್, ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ವಿಚಾರಣೆಯನ್ನು 2025ರ ಫೆಬ್ರುವರಿ 7ಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ?: ‘ಕರ್ನಾಟಕದ ಬಹುತೇಕ ನರ್ಸಿಂಗ್ ಕಾಲೇಜುಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ 2009ರಿಂದಲೂ ಅವೈಜ್ಞಾನಿಕವಾದ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಕ್ರಮ ಜರಗಿಸಿಲ್ಲ. ಆದ್ದರಿಂದ, ಈ ಬಗ್ಗೆ ಸಿಬಿಐ ಅಥವಾ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಾದ ಸಿಐಡಿ, ಲೋಕಾಯುಕ್ತ ಸಂಸ್ಥೆ ಮೂಲಕ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.