ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್: ದೇವರ ಹೆಸರಲ್ಲಿ ಮೂವರೂ ಪ್ರಮಾಣ

Published 4 ಜುಲೈ 2023, 6:59 IST
Last Updated 4 ಜುಲೈ 2023, 6:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ ನೂತನ ಸದಸ್ಯರಾದ ಜಗದೀಶ ಶೆಟ್ಟರ್‌, ಎನ್.ಎಸ್.ಭೋಸರಾಜು, ತಿಪ್ಪಣಪ್ಪ ಕಮಕನೂರ ಅವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್‌ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನಲ್ಲಿ ಹಾಗೂ ತಿಪ್ಪಣಪ್ಪ ಕಮಕನೂರ ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ದೇವಿಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದ ಸದಸ್ಯರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. 

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT