ಬೆಂಗಳೂರು: ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ, ಮಸ್ಕಿಯಿಂದ ಆಯ್ಕೆಯಾದ ಕಾಂಗ್ರೆಸ್ ಬಸನಗೌಡ ತುರುರ್ವಿಹಾಳ ಮತ್ತು ಬಸವಕಲ್ಯಾಣದಿಂದ ಚುನಾಯಿತರಾದ ಬಿಜೆಪಿಯ ಶರಣು ಸಲಗರ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರಿಗೂ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಮಾಣ ವಚನ ಬೋಧಿಸಿದರು. ಶರಣು ಸಲಗಾರ ಅವರು ಬಸವಣ್ಣ ಮತ್ತು ಬಸವಕಲ್ಯಾಣದ ಪ್ರಜೆಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಬಸವನಗೌಡ ತುರುರ್ವಿಹಾಳ ಅವರು ರೈತರು, ಮಸ್ಕಿ ಪ್ರಜೆಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾಗಿದ್ದರೂ ಇಬ್ಬರು ಶಾಸಕರೂ ವಿಳಂಬವಾಗಿ ಬಂದರು. ನೂತನ ಶಾಸಕರಿಗಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಯಬೇಕಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.