ಕನಕಪುರ: ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದು ಪಕ್ಷದಿಂದ ಓಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆ ಕುರಿತು,ತಾಲ್ಲೂಕಿನ ಬಿಜ್ಜಹಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಓಬಿಸಿ, ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದರು.

ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿರುವ ಕಾರಣಕ್ಕೆ ಪಕ್ಷದ ಓಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ. ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ ಸುಮಾರು 40ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.