ನವದೆಹಲಿ/ ರಾಮನಗರ: ಬೆಂಗಳೂರು– ಮೈಸೂರು ನಡುವೆ ಸಂಚರಿಸುವ ಒಡೆಯರ್ ಎಕ್ಸಪ್ರೆಸ್ ರೈಲನ್ನು ರಾಮನಗರದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಇದರೊಂದಿಗೆ ರಾಮನಗರ ಹಾಗೂ ಚನ್ನಪಟ್ಟಣ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್, ‘ರಾಮನಗರ ಭಾಗದ ಪ್ರಯಾಣಿಕರ ಹಿತದೃಷ್ಟಿಯಿಂದ ಒಡೆಯರ್ ರೈಲು ನಿಲುಗಡೆ ಅಗತ್ಯವಾಗಿತ್ತು. ಈ ಕುರಿತು ಜನರ ನ್ಯಾಯಸಮ್ಮತ ಬೇಡಿಕೆಯನ್ನು ಈಡೇರಿಸಲು ನಾನು ನಿರಂತರವಾಗಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೆ’ ಎಂದಿದ್ದಾರೆ.

‘ಈ ಸಂಬಂಧ ಹಲವು ಬಾರಿ ಪತ್ರಗಳ ಮೂಲಕ ಮನವಿ ಸಲ್ಲಿಸುವುದರ ಜೊತೆಗೆ ಖುದ್ದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ್ದೆ. ರಾಮನಗರದಲ್ಲಿ ರೈಲು ನಿಲುಗಡೆಯ ಅಗತ್ಯತೆ ಮತ್ತು ಜನರಿಗೆ ಆಗುವ ಅನುಕೂಲಗಳನ್ನು ವಿವರವಾಗಿ ಮನವರಿಕೆ ಮಾಡಿಕೊಟ್ಟಿದ್ದೆ. ಈ ಪ್ರಯತ್ನಗಳಿಗೆ ಇಂದು ಸಕಾರಾತ್ಮಕ ಫಲ ದೊರೆತಿದೆ’ ಎಂದು ತಿಳಿಸಿದ್ದಾರೆ.

‘ಈ ನಿರ್ಧಾರದಿಂದ ರಾಮನಗರ ಮತ್ತು ಚನ್ನಪಟ್ಟಣ ಭಾಗದ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳೊಂದಿಗೆ ಸಂಪರ್ಕ ಮತ್ತಷ್ಟು ಸುಗಮವಾಗುವುದರಿಂದ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆಗಳು ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ. ವಿಶೇಷವಾಗಿ ದೈನಂದಿನ ಪ್ರಯಾಣಿಕರಿಗೆ ಇದು ದೊಡ್ಡ ಮಟ್ಟದ ನೆರವಾಗಲಿದೆ. ಮುಂದಿನ ದಿನಗಳಲ್ಲಿ ಕೂಡ ಜನರ ಅಗತ್ಯಗಳನ್ನು ಮನಗಂಡು, ಈ ಭಾಗದ ಅಭಿವೃದ್ಧಿಗೆ ಇನ್ನಷ್ಟು ಸೌಲಭ್ಯಗಳನ್ನು ತರಲು ನಾನು ಬದ್ಧನಾಗಿದ್ದೇನೆ’ ಎಂದು ಹೇಳಿದ್ದಾರೆ.

ಸಚಿವರ ಗಮನ ಸೆಳೆದಿದ್ದರು!: ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ರಾಮನಗರ ರೈಲು ನಿಲ್ದಾಣದ ನವೀಕರಣ ಕಾರ್ಯದ ಪರಿಶೀಲನೆಗೆ ಕಳೆದ ಡಿಸೆಂಬರ್ನಲ್ಲಿ ಭೇಟಿ ನೀಡಿದ್ದರು. ಆಗ, ಸ್ಥಳೀಯ ಸಂಸದ ಡಾ. ಸಿ.ಎನ್. ಮಂಜುನಾಥ್ ಸೇರಿದಂತೆ ಸ್ಥಳಿಯ ಮುಖಂಡರು ಹಾಗೂ ಪ್ರಯಾಣಿಕರು ಸಹ ಒಡೆಯರ್ ಎಕ್ಸ್ಪ್ರೆಸ್ ರೈಲನ್ನು ರಾಮನಗರ ನಿಲುಗಡೆ ಮಾಡಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಅದಕ್ಕೆ ಸ್ಪಂದಿಸಿದ್ದ ಸೋಮಣ್ಣ, ರೈಲು ನಿಲುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ತಮ್ಮೊಂದಿಗೆ ಬಂದಿದ್ದ ಬೆಂಗಳೂರು ವಿಭಾಗೀಯ ರೈಲ್ವೆ ಅಧಿಕಾರಿಗೆ ಸೂಚನೆ ನೀಡಿದ್ದರು. ಅದಾದ ಮೂರು ತಿಂಗಳ ಬಳಿಕ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-14-1639137283

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.