ಬೆಂಗಳೂರು: ‘ಸಮೃದ್ಧ ಗ್ರಾಮ ಯೋಜನೆ’ಯಡಿ ಆಪ್ಟಿಕಲ್ ಫೈಬರ್ ಕೇಬಲ್ ಬಳಸಿ ಡಿಜಿಟಲ್ ಸೇವೆ ಕಲ್ಪಿಸಲು ರಾಜ್ಯದ 205 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಡಿಜಿಟಲ್ ಸೇವೆಗಳ ಮೂಲಕ ಪ್ರತಿಯೊಬ್ಬರಿಗೂ ಸುಲಲಿತವಾಗಿ ನೆಟ್ಬ್ಯಾಂಕಿಂಗ್, ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ಪಾವತಿ ಸೇರಿದಂತೆ ನಗರಗಳ ಮಾದರಿಯಲ್ಲಿ ಸಮಗ್ರ ಆರ್ಥಿಕ ಅವಕಾಶಗಳನ್ನು ಪ್ರತಿ ಗ್ರಾಮಗಳಿಗೂ ತಲುಪಿಸಲು ಅನುಕೂಲವಾಗಲಿದೆ. ವೇಗದ ಬ್ರಾಡ್ಬ್ಯಾಂಡ್ಗಳು ಡಿಜಿಟಲ್ ಪರಿವರ್ತನೆಗೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧ್ಯವಾಗಲಿದೆ ಎಂದಿದ್ದಾರೆ.

‘ಗ್ರಾಮಗಳ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಗ್ರಾಮೀಣ ಸಮುದಾಯಗಳು, ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳು, ಸ್ಥಳೀಯ ಉದ್ಯಮಿಗಳು, ಸಂಸ್ಥೆಗಳಿಗೆ ಹೆಚ್ಚಿನ ವೇಗದ ಬ್ರಾಡ್ಬ್ಯಾಂಡ್ (ಎಫ್ಟಿಟಿಎಚ್) ಸಾಕಷ್ಟು ನೆರವಾಗಲಿದೆ. ಈ ಸಂಪರ್ಕದ ಪ್ರಯೋಜನಗಳ ಬಗ್ಗೆ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು, ಸಂಪರ್ಕದ ಸಮರ್ಥ ಬಳಕೆ ಉತ್ತೇಜಿಸಲು ತಾಂತ್ರಿಕ ತಜ್ಞರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತ್ ಡಿಜಿಟಲ್ ಅಕ್ಸೆಸ್ ಸಮಿತಿ (ಡಿಎಸಿ) ರಚಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಚುನಾಯಿತ ಪ್ರತಿನಿಧಿಗಳು ಇಲ್ಲದಿದ್ದಾಗ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗುತ್ತದೆ. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಾರೆ. ಸಮಿತಿಯಲ್ಲಿ ನಾಲ್ವರು ಸದಸ್ಯರು ಇದ್ದು, ವೇಗದ ಬ್ರಾಡ್ಬ್ಯಾಂಡ್ ಸಂಪರ್ಕದ ಪ್ರಯೋಜನಗಳು ಹಾಗೂ ಗ್ರಾಮಗಳ ಸಾಮಾಜಿಕ, ಆರ್ಥಿಕ ಬೆಳವಣಿಗೆಯಲ್ಲಿ ಇದರ ಪಾತ್ರದ ಕುರಿತು ಅರಿವು ಮೂಡಿಸುತ್ತಾರೆ. ಡಿಜಿಟಲ್ ಲಭ್ಯತೆಯನ್ನು ಸುಧಾರಿಸುವ ಕೆಲಸವನ್ನು ಮಾಡುತ್ತಾರೆ. ಜಿಲ್ಲಾ ಪಂಚಾಯಿತಿ ಸಿಇಒ, ತಾಲ್ಲೂಕು ಪಂಚಾಯಿತಿ ಇಒಗಳು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.