ಶಿರಾ: ರಾಜ್ಯ ಸರ್ಕಾರ ಜನಗಣತಿ ಆಧಾರದ ಮೇಲೆ ಮೀಸಲಾತಿ ಕಲ್ಪಿಸಲು ಮುಂದಾಗಿದ್ದು, ಒಕ್ಕಲಿಗ ಸಮಾಜಕ್ಕೆ ಮೀಸಲಾತಿಯನ್ನು ಶೇ 4ರಿಂದ 6ಕ್ಕೆ ಏರಿಕೆ ಮಾಡುವಂತೆ ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.

ತಾಲ್ಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಶುಕ್ರವಾರ ನಡೆದ ಮಹಾಲಕ್ಷ್ಮಿ ದೇವಸ್ಥಾನದ ಸಂಪ್ರೋಕ್ಷಣ ಹಾಗೂ ಗೋಪುರ ಕಳಸ ಪ್ರತಿಷ್ಠಾಪನ ಮಹೋತ್ಸವದಲ್ಲಿ ಮಾತನಾಡಿದರು.

ಈಗಾಗಲೇ ಕುಂಚಿಟಿಗ ಸಮುದಾಯವನ್ನು ಕೇಂದ್ರ ಒಬಿಸಿ ಮೀಸಲಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದು ಸಂತಸದ ವಿಷಯ. ಸರ್ಕಾರ ಮೀಸಲಾತಿಯ ವಿಷಯದಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯ ಮಾಡಿದರೆ ಹೋರಾಟ ನಡೆಸಲಾಗುವುದು ಎಂದರು.

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯ, ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ ವೀರಶೈವ ಸಮುದಾಯ ಬಲಿಷ್ಟವಾಗಿದೆ. ಆದರೆ ಈ ಸಮುದಾಯಗಳಲ್ಲಿ ಸಹ ಬಡತನ ರೇಖೆಗಿಂದ ಕೆಳಗಿರುವ ಸಾಕಷ್ಟು ಕುಟುಂಬಗಳಿದ್ದು ಅವರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದು ಅವರು ಸಮಾಜದ ಮುಖ್ಯವಾಹಿನಿಗೆ ಬರಲು ಮೀಸಲಾತಿ ಅನಿವಾರ್ಯ ಎಂದರು.

ಎಚ್.ಎನ್.ನಾಗೇಂದ್ರ, ಎಚ್.ಎಲ್.ರಂಗನಾಥ್, ನಾಗೇಶ್ ಗೌಡ, ಕೃಷ್ಣಪ್ಪ, ಕಾಂತರಾಜು, ರಘು, ವರುಣ, ದೇವರಾಜು, ಚಿಕ್ಕಣ್ಣ, ಮೋಹನ್, ಅನಿಲ್ ಗೌಡ, ಕಲ್ಲಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-17-1743372977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.