ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆ ವೇಳೆ ಶಿರವಸ್ತ್ರ ನಿಷೇಧ: ಕೆಇಎ ಆದೇಶ ರದ್ದಿಗೆ ಒಮರ್ ಅಬ್ದುಲ್ಲಾ ಆಗ್ರಹ

Published 14 ನವೆಂಬರ್ 2023, 13:36 IST
Last Updated 14 ನವೆಂಬರ್ 2023, 13:36 IST
ಅಕ್ಷರ ಗಾತ್ರ

ಶ್ರೀನಗರ: ‍ಪರೀಕ್ಷೆ ವೇಳೆ ಶಿರವಸ್ತ್ರ ಧರಿಸುವುದಕ್ಕೆ ನಿಷೇಧ ಹೇರಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಆದೇಶವನ್ನು ಮರುಪರಿಶೀಲನೆ ನಡೆಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ ನಾಯಕರನ್ನು ಕೋರಿದ್ದಾರೆ.

‘ಇಂಥ ವಿಷಯಗಳಲ್ಲಿ ಸರ್ಕಾರ ಯಾಕೆ ಮಧ್ಯಪ್ರವೇಶ ಮಾಡಬೇಕು? ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಇಂಥ ಆದೇಶಗಳನ್ನು ಮಾಡಲಾಗುತ್ತಿದೆ. ಇವೆಲ್ಲಾ ಈ ಹಿಂದೆ ಆಗಿದ್ದರೆ ಅಚ್ಚರಿ ಪಡಬೇಕಾಗಿರಲಿಲ್ಲ. ಆಗ ಬಿಜೆಪಿ ಸರ್ಕಾರ ಇತ್ತು. ಆದರೆ ಇದು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನುವುದು ಬೇಸರದ ಸಂಗತಿ’ ಎಂದು ಹೇಳಿದ್ದಾರೆ.

‘ಕರ್ನಾಟಕದಲ್ಲಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ ಮತ್ತು ಈ ಆದೇಶವನ್ನು ಹಿಂಪಡೆಯಲು ನಾನು ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ವಿನಂತಿಸುತ್ತೇನೆ’ ಎಂದು ಹೇಳಿದ್ದಾರೆ.

ಬಾರಾಮುಲ್ಲಾದಲ್ಲಿ ನಡೆದ ಪಕ್ಷದ ಕಾರ್ಯಕ್ರಮದ ನಂತರ ಅವರು ಮಾಧ್ಯಮದವರೊಂದಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT