ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಕ್ತಿ’ ಯೋಜನೆಗೆ ಒಂದು ವರ್ಷ: ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

Published 11 ಜೂನ್ 2024, 13:15 IST
Last Updated 11 ಜೂನ್ 2024, 13:15 IST
ಅಕ್ಷರ ಗಾತ್ರ

ಬೆಂಗಳೂರು: ‘ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ‘ಶಕ್ತಿ ಯೋಜನೆ’ಯು ಇಂದಿಗೆ ಒಂದು ವರ್ಷ ಪೂರೈಸಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ.

‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಕಳೆದೊಂದು ವರ್ಷದಲ್ಲಿ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ಏರಿಕೆಯಾಗಿದೆ. ದೂರ ಪ್ರಯಾಣ ಮಾಡಿ ಹೆಣ್ಣುಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಇದನ್ನು ಹಲವು ಸಮೀಕ್ಷೆಗಳು ವರದಿ ಮಾಡಿವೆ’. ‘ಶಕ್ತಿ’ ಯೋಜನೆಯನ್ನು ಜಾರಿಗೊಳಿಸಿರುವುದು ನನ್ನಲ್ಲಿ ಸಾರ್ಥಕಭಾವ ಮೂಡಿಸಿದೆ ಎಂದು ಪೋಸ್ಟ್‌ನಲ್ಲಿ ಬರೆದು ಕೊಂಡಿದ್ದಾರೆ.

ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 226 ಕೋಟಿ ಉಚಿತ ಟಿಕೆಟ್‌ ಪಡೆದು ಮಹಿಳೆಯರು ಪ್ರಯಾಣಿಸುವ ಮೂಲಕ ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ. ಈವರೆಗಿನ ಒಟ್ಟು ಟಿಕೆಟ್‌ ಮೌಲ್ಯ ₹5,500 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ‘ಶಕ್ತಿ’ ಯೋಜನೆ ಹೊಸ ಇತಿಹಾಸ ಸೃಷ್ಟಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಧಾರವಾಡ ಹೊಸ ಬಸ್‌ ನಿಲ್ದಾಣದಲ್ಲಿ ಶಕ್ತಿ ಯೋಜನೆ ಚಾಲನೆ ಸಂದರ್ಭದಲ್ಲಿ ಮಹಿಳೆಯೊಬ್ಬರು ಖುಷಿಯಿಂದ ಬಸ್‌ಗೆ ನಮಸ್ಕರಿಸಿದರು.

ಧಾರವಾಡ ಹೊಸ ಬಸ್‌ ನಿಲ್ದಾಣದಲ್ಲಿ ಶಕ್ತಿ ಯೋಜನೆ ಚಾಲನೆ ಸಂದರ್ಭದಲ್ಲಿ ಮಹಿಳೆಯೊಬ್ಬರು ಖುಷಿಯಿಂದ ಬಸ್‌ಗೆ ನಮಸ್ಕರಿಸಿದರು.

ಬಿ.ಎಂ.ಕೇದಾರನಾಥ/ ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT