ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿದ ಕೆಇಎ

Last Updated 20 ನವೆಂಬರ್ 2021, 11:40 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇದೇ ತಿಂಗಳ ನವೆಂಬರ್30ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಸಲು ಡಿಸೆಂಬರ್6 ಕೊನೆಯ ದಿನ.

ಈ ಮೊದಲು ಅರ್ಜಿ ಸಲ್ಲಿಸಲುನ. 6ರ ಕೊನೆಯ ದಿನ ಎಂದು ನಿಗದಿಪಡಿಸಲಾಗಿತ್ತು. ಕೆ– ಸೆಟ್‌ (ಕರ್ನಾಟಕ ರಾಜ್ಯಮಟ್ಟದ ಅರ್ಹತಾ ಪರೀಕ್ಷೆ) ಫಲಿತಾಂಶ ನ. 2ರಂದು ಪ್ರಕಟವಾದ ಕಾರಣ ಮತ್ತೆ ಕೊನೆಯ ದಿನವನ್ನು ನ. 20ರವರೆಗೆ ವಿಸ್ತರಿಸಲಾಗಿತ್ತು.

ಇದೀಗ ಕಂಪ್ಯೂಟರ್‌ ವಿಜ್ಞಾನ, ರಾಜ್ಯಶಾಸ್ತ್ರ, ರಸಾಯನ ವಿಜ್ಞಾನ, ಎಲೆಕ್ಟ್ರೋನಿಕ್ಸ್‌, ಸಸ್ಯ ವಿಜ್ಞಾನ, ಪ್ರಾಣಿ ವಿಜ್ಞಾನ, ಅರ್ಥಶಾಸ್ತ್ರ ಮತ್ತು ಭೌತವಿಜ್ಞಾನ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ತತ್ಸಮಾನ ವಿಷಯಗಳ ವಿದ್ಯಾರ್ಹತೆಯನ್ನು ನೀಡಿ ರಾಜ್ಯ ಸರ್ಕಾರ ನ. 18ರಂದು ಅಧಿಸೂಚನೆ ಹೊರಡಿಸಿದೆ. ಹೀಗಾಗಿ, ಕೊನೆಯ ದಿನವನ್ನು ಮತ್ತೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT