ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಜೂಜು ಮತ್ತು ಬೆಟ್ಟಿಂಗ್ ನಿಷೇಧಿಸುವ ಕರ್ನಾಟಕ ಪೊಲೀಸ್ ತಿದ್ದುಪಡಿ ಮಸೂದೆ 2021 ಕ್ಕೆ ವಿಧಾನಸಭೆ ಮಂಗಳವಾರ ಅಂಗೀಕಾರ ನೀಡಿತು.

ಇಂದಿನ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಇಂತಹ ಕಠಿಣ ಕಾನೂನಿನ ಅಗತ್ಯವಿದೆ ಎಂದು ಮಸೂದೆ ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಪಾದಿಸಿದರು.

ಹಲವು ರಾಜ್ಯಗಳಲ್ಲಿ ಈಗಾ ಗಲೇಆನ್‌ಲೈನ್ ಜೂಜು ಮತ್ತು ಬೆಟ್ಟಿಂಗ್ ಮೇಲೆ ನಿಷೇಧ ವಿಧಿಸಲಾಗಿದೆ ಎಂದು ಅವರು ವಿವರಿಸಿದರು.

ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್ ಮಾತನಾಡಿ, ವಿದೇಶಗಳಲ್ಲಿ ಸರ್ವರ್‌ಗಳನ್ನು ಇಟ್ಟುಕೊಂಡು ಇಂತಹ ವ್ಯವಹಾರ ನಡೆಸುತ್ತಿದ್ದಾರೆ. ಇವುಗಳ ಮೇಲೆ ಕಡಿವಾಣ ಹಾಕಬೇಕಾಗಿದೆ, ಇದಕ್ಕೆ ಪೂರಕವಾದ ತಂತ್ರಜ್ಞಾನವನ್ನು ಹೊಂದಬೇಕಾಗಿದೆ ಎಂದು ಹೇಳಿದರು.

ಈಗಾಗಲೇ ಸುಗ್ರಿವಾಜ್ಞೆ ರೂಪದಲ್ಲಿರುವ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ 2021ಕ್ಕೂ ವಿಧಾನಸಭೆ ಅಂಗೀಕಾರ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.