ಬೆಂಗಳೂರು: ‘ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಲು ಶೀಘ್ರದಲ್ಲಿ ಕಾನೂನು ರೂಪಿಸಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿಯವರ ಪೊಲೀಸ್ ಪದಕ ಪ್ರದಾನ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಆನ್‌ಲೈನ್ ಗೇಮ್‌ಗಳಂತಹ ದುಶ್ಚಟಗಳಿಗೆ ಯುವಜನರು ತುತ್ತಾಗುತ್ತಿದ್ದಾರೆ. ಪರಿಣಾಮವಾಗಿ ಅವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಈ ಪರಿಸ್ಥಿತಿ ತಪ್ಪಿಸಲು ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವ ಚಿಂತನೆ ನಡೆದಿದೆ’ ಎಂದು ತಿಳಿಸಿದರು.

ಬೇರೆ, ಬೇರೆ ರಾಜ್ಯಗಳು ಈಗಾಗಲೇ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಿವೆ. ಅಲ್ಲಿ ಈ ಸಂಬಂಧ ರೂಪಿಸಿರುವ ಕಾನೂನುಗಳು ಮತ್ತು ಹೊರಡಿಸಿರುವ ಆದೇಶಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೂ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.