ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJP ಸರ್ಕಾರ ಜಾರಿಗೆ ತಂದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ತರಬೇತಿ ಸ್ಥಗಿತ

Published 29 ನವೆಂಬರ್ 2023, 22:42 IST
Last Updated 29 ನವೆಂಬರ್ 2023, 22:42 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಕಾಂಗ್ರೆಸ್‌ ನೇತೃತ್ವದ ಸರ್ಕಾರ ಸ್ಥಗಿತಗೊಳಿಸಿದೆ.

ದ್ವಿತೀಯ ಪಿಯು ನಂತರ ಖಾಸಗಿ ತರಬೇತಿ ಸಂಸ್ಥೆಗಳಿಗೆ ತೆರಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ, ಅದರಲ್ಲೂ ಗ್ರಾಮೀಣರಿಗೆ ಸಿಇಟಿ, ನೀಟ್‌, ಜೆಇಇ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಆನ್‌ಲೈನ್‌ ತರಬೇತಿ ಆರಂಭಿಸಿತ್ತು. 2019–20ರಿಂದ ಆರಂಭವಾದ ಈ ಅವಕಾಶವನ್ನು ಇದುವರೆಗೂ 2 ಲಕ್ಷ ವಿದ್ಯಾರ್ಥಿಗಳು ಬಳಸಿಕೊಂಡಿದ್ದರು.

ಉನ್ನತ ಶಿಕ್ಷಣ ಇಲಾಖೆಯ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್‌) ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಅಧ್ಯಯನ ಸಾಮಗ್ರಿಗಳನ್ನು ಅಪ್‌ಲೋಡ್‌ ಮಾಡಲಾಗಿತ್ತು. ಆಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ವಿವರಗಳನ್ನು ನೋಂದಾಯಿಸುವ ಮೂಲಕ ಪ್ರವೇಶ ಪಡೆಯಬಹುದಾಗಿತ್ತು. ವೆಬ್‌ಸೈಟ್, ಯೂಟೂಬ್‌ ಅಥವಾ ಗೆಟ್‌ಸಿಇಟಿಗೋ ಅಪ್ಲಿಕೇಶನ್‌ ಮೂಲಕವೂ ತರಬೇತಿ, ಅಧ್ಯಯನ ಸಾಮಗ್ರಿಗಳನ್ನು ಪಡೆಯಬಹುದಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT