ಕಮಲನಗರ (ಬೀದರ್ ಜಿಲ್ಲೆ): ತಾಲ್ಲೂಕಿನ ಗಂಗನಬೀಡ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಮರಾಠಿ ಮಾಧ್ಯಮ)ಯ ಕಟ್ಟಡ ಶಿಥಿಲಗೊಂಡಿದ್ದು,ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ.

ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಈ ಶಾಲೆಯಲ್ಲಿ 1 ರಿಂದ 6ನೇ ತರಗತಿಯವರೆಗೆ 143 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 1996-97ನೇ ಸಾಲಿನಲ್ಲಿ ಸರ್ವ ಶಿಕ್ಷಣ ಅಭಿಯಾನದಡಿ ಶಾಲಾ ಕೊಠಡಿ, ಶೌಚಾಲಯ ನಿರ್ಮಿಸಲಾಗಿದೆ.ಶಾಲಾ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿರುವ ಪ್ಲಾಸ್ಟರ್ ಕಳಚಿದ್ದು, ಕಬ್ಬಿಣದ ಕಂಬಿಗಳು ಕಾಣಿಸುತ್ತಿವೆ.

ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಹೀಗಾಗಿಮಕ್ಕಳು ಶಾಲೆಯಲ್ಲಿ ಕೂರಲು ಹಿಂಜರಿಯುತ್ತಾರೆ.

ಮಕ್ಕಳನ್ನು ಮರದ ನೆರಳಿನಲ್ಲಿ ಇಲ್ಲವೇ ಬಯಲಲ್ಲಿಯೇ ಕೂರಿಸಿ ಶಿಕ್ಷಕರು ಪಾಠ ಮಾಡುತ್ತಾರೆ. ಮುಳ್ಳು ಕಂಟಿಗ
ಳಿಂದ ಆವೃತವಾಗಿರುವ ಶಾಲಾ ಆವರಣದ ಸುತ್ತ ಗ್ರಾಮಸ್ಥರು ಮಲ ವಿಸರ್ಜನೆ ಮಾಡುತ್ತಿದ್ದು, ಇದರಿಂದದುರ್ವಾಸನೆ ಬರುತ್ತದೆ. ಬಯಲಲ್ಲಿ ಕುಳಿತರೂ ಮಕ್ಕಳಿಗೆ ನೆಮ್ಮದಿ ಇಲ್ಲವಾಗಿದೆ.

‘ಶಾಲಾ ಆವರಣದಲ್ಲಿ ಕೊಳವೆಬಾವಿ ಕೊರೆಸದ ಕಾರಣ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಶೌಚಾಲಯದ ಬಾಗಿಲಿಗೆ ಬೀಗ ಜಡಿಯಲಾಗಿದೆ.ಶಾಲೆಯ ಈ ದುಸ್ಥಿತಿಯ ಬಗ್ಗೆಅಧಿಕಾರಿಗಳ ಗಮನ ಸೆಳೆದಿದ್ದೇವೆ. ಸ್ಥಳಕ್ಕೆ ಭೇಟಿ ನೀಡಿದ್ದಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಯ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇನ್ನೂ ಸ್ಥಳಾಂತರ ಪ್ರಕ್ರಿಯೆ ನಡೆದಿಲ್ಲ’ ಎಂದು ಗ್ರಾಮದ ಅಂಕುಶ್ ವಾಡೀಕರ್ ತಿಳಿಸಿದರು.

‘ಶಾಲೆಯ ಕಟ್ಟಡ ನಿರ್ಮಾಣಕ್ಕೆ ಸ್ಥಳದ ಕೊರತೆ ಇದೆ. ಉಪವಿಭಾಗಾಧಿಕಾರಿ ಅವರ ಗಮನಕ್ಕೆ ತರಲಾಗಿದ್ದು, 15 ದಿನಗಳಲ್ಲಿ ಸ್ಥಳ ಗುರುತಿಸಲಾಗುವುದು. ಕೆಕೆಆರ್‌ಡಿಬಿ ಅನುದಾನದಲ್ಲಿ ಕಟ್ಟಡ ನಿರ್ಮಿಸಲಾಗುವುದು’ ಎಂದು ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ. ಮಂಜುನಾಥ ಅವರು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.