ಕೋಲಾರ: ‘ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ, ಸದ್ಯಕ್ಕೆ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದರು.

ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಚಿ ಸಚಿವ ದಿವಂಗತ ಎಂ.ವಿ.ಕೃಷ್ಣಪ್ಪ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ‘ನನಗೆ ಆಪರೇಷನ್ ಕಮಲದ ಬಗ್ಗೆ ಗೊತ್ತಿಲ್ಲ, ಆದರೆ ಕಮಲದ ಬಗ್ಗೆ ಮಾತ್ರ ಗೊತ್ತು’ ಎಂದು ಹೇಳಿಕೆ ನೀಡಿದರು.

‘ಮಂಡ್ಯ ಜಿಲ್ಲೆಯಲ್ಲಿನ ರಾಜಕೀಯ ಬೆಳೆವಣಿಗೆಗಳ ಬಗ್ಗೆ ಮಾಹಿತಿಯಿಲ್ಲ. ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಷ್ ಸ್ಪರ್ಧಿಸುವ ಬಗ್ಗೆ ಏನು ಗೊತ್ತಿಲ್ಲ. ಜನ ಬಯಸುವ ಸರ್ಕಾರ ನಡೆಸಬೇಕುನ್ನುವುದು ಎಲ್ಲರ ಅಭಿಪ್ರಾಯ ಎಂದರು.

‘ಕೇಂದ್ರ ಸರ್ಕಾರ ಜನಪರ ಬಜೆಟ್ ಮಂಡಿಸಿದ್ದು, ಜನಪರವಾಗಿಯೇ ಇದೆ. ಇದಕ್ಕೆ ಯಾವುದೇ ರೀತಿ ವಿರೋಧ ವ್ಯಕ್ತವಾಗಿಲ್ಲ. ಬಿಜೆಪಿ ಪಕ್ಷ ನನಗೆ ಎಲ್ಲಾ ಕಾರ್ಯಕ್ರಮಗಳಿಗೂ ಆಹ್ವಾನ ನೀಡುತ್ತಿದೆ. ಅಗತ್ಯ ಇರುವ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗಿಯಾಗುತ್ತಿದ್ದೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.