ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಘಟನೆ ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ಪಾದರಾಯನಪುರ ಘಟನೆ ಖಂಡನೀಯ. ಇದಕ್ಕೆ ಕಾರಣರಾದವರನ್ನು ಶಿಕ್ಷೆಗೆ ಗುರಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕೊರೊನಾ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಸಹಮತವಿದೆ. ಇದನ್ನು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ.

ಯಾರೇ ಆಗಲಿ, ಕಾನೂನಿಗೆ ಗೌರವ ಕೊಡಬೇಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.