2021ರಲ್ಲಿ ರಾಜ್ಯ ಸರ್ಕಾರವು ಶಿವಮೊಗ್ಗದಲ್ಲಿ ಇನ್ನೊಂದು ಪಶು ವೈದ್ಯಕೀಯ ವಿಶ್ವವಿದ್ಯಾಲಯ ಸ್ಥಾಪಿಸಲು ಮುಂದಾಗಿತ್ತು. ಇದರ ಮಹತ್ವ ಇಷ್ಟಿರುವಾಗ ಬೀದರ್ ಪಶು ವಿವಿ ವಿಲೀನಕ್ಕೆ ಮುಂದಾಗಿರುವುದು ಸರಿಯಲ್ಲ.
– ವೀರಭದ್ರಪ್ಪ, ಉಪ್ಪಿನ ಸದಸ್ಯ ಅಖಿಲ ಭಾರತೀಯ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ
ದೊಡ್ಡ ಅನ್ಯಾಯ ಹಿಂದುಳಿದ ಪ್ರದೇಶ ಎಂಬ ಕಾರಣಕ್ಕೆ ಸರ್ಕಾರ ಈ ಭಾಗಕ್ಕೆ ವಿಶ್ವವಿದ್ಯಾಲಯ ಕೊಟ್ಟಿದೆ. ಈಗ ಕಸಿದುಕೊಂಡರೆ ಅದಕ್ಕೆ ಅರ್ಥವೇ ಇರುವುದಿಲ್ಲ. ಹಾಗೆ ಮಾಡಿದರೆ ಈ ಭಾಗಕ್ಕೆ ದೊಡ್ಡ ಅನ್ಯಾಯವಾಗಲಿದೆ.
– ಶಿವಯ್ಯ ಸ್ವಾಮಿ, ಸದಸ್ಯ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ
ಮಾಹಿತಿ ವಿನಿಮಯ ಕೃಷಿ ತೋಟಗಾರಿಕೆ ಹಾಗೂ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಪುನರ್ ಸಂಘಟನೆ ಉನ್ನತಾಧಿಕಾರ ಸಮಿತಿ ನಮ್ಮ ವಿಶ್ವವಿದ್ಯಾಲಯಕ್ಕೆ ಭೇಟಿ ಕೊಟ್ಟಿದೆ. ವಿವಿಗೆ ಸಂಬಂಧಿಸಿದಂತೆ ಕೇಳಿದ ಮಾಹಿತಿ ನೀಡಲಾಗಿದೆ.