ಬೆಂಗಳೂರು: ‘ಕೆನಡಾದಲ್ಲಿ 2017ರ ಆಗಸ್ಟ್ನಲ್ಲಿ ನಡೆದಿದ್ದ ಏಳನೇ ವಿಶ್ವ ಕುಬ್ಜ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಗೆದ್ದಿರುವ ಅಂಗವಿಕಲ ಕ್ರೀಡಾಪಟುಗಳಿಗೆ 2013ರ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಗದು ಬಹುಮಾನ ನೀಡಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಂಗಳೂರಿನವರಾದ ಸಿ.ವಿ.ರಾಜಣ್ಣ ಮತ್ತು ಬೆಂಗಳೂರಿನ ಸುನೀತಾ, ಬೆಂಗಳೂರು ಗ್ರಾಮಾಂತರ ಅಜಗೊಂಡನಹಳ್ಳಿಯ ಮುನಿರಾಜು ಪ್ರಕಾಶ್, ಧಾರವಾಡದ ದೇವಪ್ಪ ಮಹದೇವಪ್ಪ ಮೋರೆ, ಬಂಗಾರಪೇಟೆಯ ಎನ್.ನಾಗೇಶ್, ಹಾಸನ ಜಿಲ್ಲೆ ಅಬ್ಬೂರು ಮಾಚಗೊಂಡನಹಳ್ಳಿಯ ಕೆ.ಆರ್.ಶಾಂತಕುಮಾರ ಹಾಗೂ ಬೆಳಗಾವಿಯ ಸಿಮ್ರಾನ್ ಗೌಂಡಲ್ಕರ್ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ವಿಶ್ವ ಕುಬ್ಜ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದವರಿಗೆ ₹10 ಲಕ್ಷ, ಬೆಳ್ಳಿ ಪದಕ ಗೆದ್ದವರಿಗೆ ₹7 ಲಕ್ಷ ಮತ್ತು ಕಂಚಿನ ಪದಕ ಗೆದ್ದವರಿಗೆ ₹5 ಲಕ್ಷ ನೀಡುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿತ್ತು. ಹೀಗಾಗಿ, ಅರ್ಜಿದಾರರು ನಗದು ಬಹುಮಾನಕ್ಕೆ ಅರ್ಹರಾಗಿದ್ದು, ಮುಂದಿನ ಎಂಟು ವಾರಗಳಲ್ಲಿ ನ್ಯಾಯಾಲಯದ ಈ ಆದೇಶವನ್ನು ಜಾರಿಗೊಳಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅರ್ನವ್ ಆರ್.ಬಾಗಲವಾಡಿ ವಾದ ಮಂಡಿಸಿದ್ದರು.

ವಕೀಲರ ಚಿಹ್ನೆ ಬಳಕೆ: ಕ್ರಮ

ರಾಜ್ಯದಲ್ಲಿ ವಕೀಲರಲ್ಲದವರು ತಮ್ಮ ವಾಹನಗಳ ಮೇಲೆ ವಕೀಲರ ಚಿಹ್ನೆ ಲಗತ್ತಿಸಿದ್ದರೆ ಅಂತಹ ವಾಹನಗಳ ಸಂಖ್ಯೆ ಮತ್ತು ಫೊಟೋ ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸಾರ್ವಜನಿಕರು ಹಾಗೂ ವಕೀಲರಲ್ಲಿ ಮನವಿ ಮಾಡಿದೆ. ಈ ಕುರಿತು ಪ್ರಕಟಣೆ ನೀಡಿರುವ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಸ್.ಎಸ್. ಮಿಟ್ಟಲಕೋಡ ‘ರಾಜ್ಯದಲ್ಲಿ ವಕೀಲರಲ್ಲದವರು ಹಾಗೂ ವಾಣಿಜ್ಯ ವಾಹನಗಳಿಗೆ ವಕೀಲರ ಚಿಹ್ನೆ ಲಗತ್ತಿಸಿಕೊಂಡು ವಕೀಲ ಸಮುದಾಯದ ಹೆಸರಿನ ದುರುಪಯೋಗ ಹಾಗೂ ವೃತ್ತಿಗೆ ಅಪಮಾನ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ. ‘ವಾಹನಗಳ ಸಂಖ್ಯೆ ಅಥವಾ ಪೊಟೋವನ್ನು ಪರಿಷತ್ತಿನ ಅಧಿಕೃತ ಇ ಮೇಲ್ Kar_barcouncil@yahoo.com ಗೆ ಕಳುಹಿಸಿಕೊಡಬೇಕು. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

‘ಪರಿಹಾರ ಧನಕ್ಕೆ ಜಿಎಸ್ಟಿ ಪಾವತಿ ಸಲ್ಲ’

‘ಅಭಿವೃದ್ಧಿ ಯೋಜನೆಗಳಿಗೆ ತಮ್ಮ ಜಮೀನುಗಳನ್ನು ಕಳೆದುಕೊಳ್ಳುವ ರೈತರಿಗೆ ಪರಿಹಾರ ರೂಪದಲ್ಲಿ ನೀಡಲಾಗುವ ಮೊತ್ತಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸುವಂತಿಲ್ಲ’ ಎಂದು ಹೈಕೋರ್ಟ್ ಆದೇಶಿಸಿದೆ. ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಷೋಕಾಸ್ ನೋಟಿಸ್ಗಳನ್ನು ಪ್ರಶ್ನಿಸಿ ನಗರದ ಆರ್.ಆಶಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಪ್ರಕರಣವೇನು?: ಬೆಂಗಳೂರು ಮೆಟ್ರೊ ರೈಲು ಯೋಜನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಬೆಂಗಳೂರಿನ ಸುತ್ತಮುತ್ತಲ ಪ್ರದೇಶದಲ್ಲಿ ರೈತರಿಂದ ಜಮೀನುಗಳನ್ನು ಸ್ವಾಧೀನಪಡಿಸಿಕೊಂಡಿತ್ತು. ರೈತರು ಇದಕ್ಕೆ ಪರಿಹಾರ ಪಡೆದಿದ್ದರು. ‘ಈ ಪರಿಹಾರ ಧನಕ್ಕೆ ಜಿಎಸ್ಟಿ ಪಾವತಿಸಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆ ರೈತರಿಗೆ ಷೋಕಾಸ್ ನೋಟಿಸ್ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.