ಈ ಹಿಂದೆ ವರ್ಗಾವಣೆಗೆ ಸಿದ್ಧತೆ ನಡೆಸಿದಾಗ, ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯನ್ನು ಪ್ರಶ್ನಿಸಿ ಶಿಕ್ಷಕರೊಬ್ಬರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ ವರ್ಗಾವಣೆ ಪ್ರಕ್ರಿಯೆ ತಡೆ ತರಲಾಗಿತ್ತು. 2016–17 ರಲ್ಲಿ ಹೆಚ್ಚುವರಿ ಶಿಕ್ಷಕರೆಂದು ಗುರುತಿಸಿದ ಕಾರಣಕ್ಕೆ ಅನೇಕ ಶಿಕ್ಷಕರು ಬೇರೆ ತಾಲ್ಲೂಕಿಗೆ ವರ್ಗಾವಣೆಗೊಂಡಿದ್ದರು. ಈ ರೀತಿಯ ಸಂಕಷ್ಟ ಅನುಭವಿಸುತ್ತಿರುವ ಕೆಲವು ಶಿಕ್ಷಕರು, ತಮ್ಮನ್ನು ಬಿಟ್ಟು 2019–20ರಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದವರಿಗೆ ಕೌನ್ಸೆಲಿಂಗ್‌ನಲ್ಲಿ ಆದ್ಯತೆ ನೀಡಿರುವುದನ್ನು ಪ್ರಶ್ನಿಸಿ ಕೆಎಟಿಗೆ ದೂರು ನೀಡಿದ್ದರು.