ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹತೆಯಿಂದ ರಕ್ಷಿಸಲು ಸುಗ್ರೀವಾಜ್ಞೆಗೆ ನಿರ್ಧಾರ

Published 6 ಜನವರಿ 2024, 22:55 IST
Last Updated 6 ಜನವರಿ 2024, 22:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ. ದೇಶಪಾಂಡೆ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮತ್ತು ಸಲಹೆಗಾರ ಬಿ.ಆರ್‌. ಪಾಟೀಲ ಅವರನ್ನು ಅನರ್ಹತೆಯಿಂದ ರಕ್ಷಿಸಲು ‘ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) ಕಾಯ್ದೆ’ಗೆ ತಿದ್ದುಪಡಿ ತರುವ ಮಸೂದೆಗೆ ಸಂಪುಟ ಒಪ್ಪಿಗೆ ನೀಡಿದೆ.

ವಿಧಾನಸಭೆ ಅಥವಾ ವಿಧಾನ ಪರಿಷತ್‌ನ ಸದಸ್ಯರು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಾಗ ಅವರನ್ನು ಅನರ್ಹತೆಯಿಂದ ರಕ್ಷಿಸುವುದಕ್ಕಾಗಿ ‘ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) ಕಾಯ್ದೆ’ಗೆ ತಿದ್ದುಪಡಿ ತರುವ ಮಸೂದೆಗೆ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಒಪ್ಪಿಗೆ ನೀಡಲಾಗಿತ್ತು.

ಈಗ ದೇಶಪಾಂಡೆ, ರಾಯರಡ್ಡಿ ಮತ್ತು ಬಿ.ಆರ್‌. ಪಾಟೀಲ ಅವರನ್ನು ಅನರ್ಹತೆಯಿಂದ ರಕ್ಚಿಸುವುದಕ್ಕಾಗಿ ಪುನಃ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ. ಅದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT