ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಅಂಗಾಂಗಕ್ಕಾಗಿ ಕಾದಿವೆ ಸಾವಿರಾರು ಜೀವ

ಮಿದುಳು ನಿಷ್ಕ್ರಿಯಗೊಂಡವರಲ್ಲಿ ಅಂಗಾಂಗ ದಾನ ಮಾಡುವವರ ಸಂಖ್ಯೆ ಏರಿಕೆ
Published 3 ಆಗಸ್ಟ್ 2023, 0:30 IST
Last Updated 3 ಆಗಸ್ಟ್ 2023, 0:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಅಂಗಾಂಗಕ್ಕಾಗಿ ಕಾಯುತ್ತಿರುವ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (ಸೊಟ್ಟೊ) ಅಡಿ 7 ಸಾವಿರಕ್ಕೂ ಅಧಿಕ ಮಂದಿ ಅಂಗಾಂಗಕ್ಕಾಗಿ ಹೆಸರು ನೋಂದಾಯಿಸಿದ್ದಾರೆ.

ಆರೋಗ್ಯ ಇಲಾಖೆಯು ರಾಷ್ಟ್ರೀಯ ಅಂಗಾಂಗ ದಿನದ ಪ್ರಯುಕ್ತ ಇದೇ ಗುರುವಾರ ಇಲ್ಲಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿದೆ. 151 ಅಂಗಾಂಗ ದಾನಿಗಳ ಕುಟುಂಬವನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ.

ಅಂಗಾಂಗ ಹಾಗೂ ಅಂಗಾಂಶವನ್ನು ಸಂಗ್ರಹಿಸಿ, ಅಂಗಾಂಗ ವೈಫಲ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಕಸಿ ಮಾಡಿಸಲು ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ನೆರವಾಗುತ್ತಿದೆ. ಈ ಸಂಸ್ಥೆಯಡಿ ಕಳೆದ ವರ್ಷ ಗರಿಷ್ಠ ಸಂಖ್ಯೆಯಲ್ಲಿ ಅಂಗಾಂಗ ದಾನ ನಡೆದಿತ್ತು. ಮಿದುಳು ನಿಷ್ಕ್ರಿಯಗೊಂಡವರಲ್ಲಿ ಈ ವರ್ಷ ಈಗಾಗಲೇ 90ಕ್ಕೂ ಅಧಿಕ ಮಂದಿ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಈ ಮೊದಲು ಜೀವಸಾರ್ಥಕತೆ ಹೆಸರಿನಿಂದ ನೋಂದಾಯಿಸಲಾಗಿದ್ದ ಸೊಟ್ಟೊ, ಅಂಗಾಂಗ ದಾನಕ್ಕೆ ಉತ್ತೇಜನ ನೀಡುವುದು ಹಾಗೂ ಮೃತ ದಾನಿಗಳಿಂದ ಅಂಗಾಂಗ ಒದಗಿಸುವ ಕಾರ್ಯವನ್ನು ಮಾಡುತ್ತಿದೆ. 

‘ಮಾನವ ಅಂಗಾಂಗ ದಾನ ಕಸಿ ಕಾಯ್ದೆ 1994 ಅಂಗಾಂಗ ದಾನಕ್ಕೆ ಉತ್ತೇಜನ ನೀಡುತ್ತಿದೆ. ಮಿದುಳು ನಿಷ್ಕ್ರಿಯಗೊಂಡ ಯಾವುದೇ ವ್ಯಕ್ತಿ ಅಂಗಾಂಗಗಳನ್ನು ದಾನ ಮಾಡಬಹುದಾಗಿದೆ. ಇದು ಕಾನೂನು ಬದ್ಧವಾಗಿದೆ. ಮಿದುಳು ನಿಷ್ಕ್ರಿಯಗೊಂಡ ಬಳಿಕ ಕುಟುಂಬ ಸದಸ್ಯರ ಒಪ್ಪಿಗೆ ಮೇರೆಗೆ ಅಂಗಾಂಗವನ್ನು ದಾನವಾಗಿ ಪಡೆಯಲಾಗುತ್ತದೆ’ ಎಂದು ಸಂಸ್ಥೆಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

70 ಆಸ್ಪತ್ರೆಗಳಲ್ಲಿ ಕಸಿ: ‘ಒಬ್ಬ ದಾನಿಯು ಹೃದಯ, ಮೂತ್ರಪಿಂಡ, ಶ್ವಾಸಕೋಶ, ಯಕೃತ್ತು, ಸಣ್ಣ ಕರುಳು ಹಾಗೂ ಮೇದೋಜಿರಕ ಗ್ರಂಥಿ ದಾನದ ಮೂಲಕ 8 ಜೀವಗಳಿಗೆ, ಹೃದಯದ ಕವಾಟ, ಚರ್ಮ, ಕಣ್ಣು ಗುಡ್ಡೆ ಸೇರಿ ವಿವಿಧ ಅಂಗಾಂಶಗಳ ನೆರವಿನಿಂದ 50 ಮಂದಿಗೆ ನೆರವಾಗಬಹುದು. ಅಂಗಾಂಗ ದಾನಕ್ಕೆ ಯಾವುದೇ ವಯಸ್ಸಿನ ಮಿತಿಯಿಲ್ಲ’ ಎಂದು ಹೇಳಿದ್ದಾರೆ.

‘ಆರೋಗ್ಯ ಇಲಾಖೆಯಿಂದ ಮಾನ್ಯತೆ ಪಡೆದ ರಾಜ್ಯದ 70 ಆಸ್ಪತ್ರೆಗಳಲ್ಲಿ ಅಂಗಾಂಗ ಕಸಿ ಚಿಕಿತ್ಸೆ ಲಭ್ಯವಿದೆ. ಬೆಂಗಳೂರು ನಗರದಲ್ಲಿ 47, ದಕ್ಷಿಣ ಕನ್ನಡದಲ್ಲಿ 9, ಮೈಸೂರಿನಲ್ಲಿ 6, ಧಾರವಾಡದಲ್ಲಿ 4, ಕಲಬುರಗಿಯಲ್ಲಿ 2, ಬೆಳಗಾವಿ ಮತ್ತು ಉಡುಪಿಯಲ್ಲಿ ತಲಾ ಒಂದು ಆಸ್ಪತ್ರೆ ಅಂಗಾಂಗ ಕಸಿಗೆ ನೋಂದಣಿಯಾಗಿವೆ. ಅಂಗಾಂಗ ವಿಫಲರಾದವರು ಹಾಗೂ ಅಂಗಾಂಗ ದಾನ ಮಾಡಲು ಬಯಸುವವರು ದೂರವಾಣಿ ಸಂಖ್ಯೆ 080-23295636 ಅಥವಾ 9845006768ಕ್ಕೆ ಸಂಪರ್ಕಿಸಬಹುದು’ ಎಂದು’ ತಿಳಿಸಿದ್ದಾರೆ.

ಅಂಗಾಂಗಳಿಗೆ ಕಾಯುತ್ತಿರುವವರು ಅಂಗಾಂಗಳು;ನೋಂದಾಯಿತರು ಮೂತ್ರಪಿಂಡಗಳು;5288 ಯಕೃತ್ತು;1686 ಹೃದಯ;161 ಶ್ವಾಸಕೋಶಗಳು;68 ಹೃದಯ ಮತ್ತು ಶ್ವಾಸಕೋಶಗಳು;28 ಯಕೃತ್‌ ಮತ್ತು ಮೂತ್ರಪಿಂಡ;45 ಮೂತ್ರಪಿಂಡ ಮತ್ತು ಮೇದೋಜೀರಕ ಗ್ರಂಥಿ;23 ಹೃದಯ ಮತ್ತು ಮೂತ್ರಪಿಂಡ;2 ಸಣ್ಣ ಕರುಳು;1

ವರ್ಷವಾರು ಅಂಗಾಂಗ ದಾನ  ವರ್ಷ; ದಾನಿಗಳು 2017;68 2018;89 2019;105 2020;35 2021;70 2022;151 2023 (ಜುಲೈವರೆಗೆ);94

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT