ವೈದ್ಯಕೀಯ ಶಿಕ್ಷಣ ಹೊರತುಪಡಿಸಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಪ್ರತಿ ವರ್ಷ ಸರಾಸರಿ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆಯತ್ತಾರೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ ಮತ್ತು ನ್ಯಾಚುರೋಪಥಿ, ಬಿ ಫಾರ್ಮಾ, ಡಿ ಫಾರ್ಮಾ ಹಾಗೂ ನರ್ಸಿಂಗ್ ಕೋರ್ಸ್‌ಗಳಿಗೆ ಈ ಪ್ರವೇಶ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಆಳವಾದ ಜ್ಞಾನ ಪರೀಕ್ಷಿಸಲು ವಿಸ್ತೃತ ಪಠ್ಯಕ್ರಮ ಅನುಸರಿಸಲಾಗುತ್ತದೆ ಹೊರತು ಆಯಾ ಶೈಕ್ಷಣಿಕ ವರ್ಷದ ಪಠ್ಯಪುಸ್ತಕವನ್ನಲ್ಲ ಎಂದು ವರದಿಯಲ್ಲಿ ವಿವರಿಸಿದೆ.