ನಾನು ಮತ್ತು ನನ್ನ ಸ್ನೇಹಿತರು ಚಿಕ್ಕಬಳ್ಳಾಪುರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವವನ್ನು ವೀಕ್ಷಿಸಲು ಬಂದಿದ್ದೆವು. ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಲಕ್ಷಾಂತರ ಜನ ಸೇರಿದ್ದರು. ನಾವು ಕ್ರೀಡಾಂಗಣದ ಒಳಗಡೆ ಪ್ರವೇಶಿಸುವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ, ನನ್ನ ಕಾಲಿನ ಮೇಲೆ ಬ್ಯಾರಿಕೇಡ್ ಬಿದ್ದು, ಗಾಯವಾಗಿತ್ತು. ನನ್ನ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಬಂದು, ಚಿಕಿತ್ಸೆ ಕೊಡಿಸಿದ್ದಾರೆ. ಈ ವಿಜಯೋತ್ಸವದಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು. ಆದರೆ, ಯಾವುದೇ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದ ಕಾರಣ ಈ ದುರಂತವಾಗಿದೆ.
-ಮಂಜುನಾಥ್, ಚಿಕ್ಕಬಳ್ಳಾಪುರ
ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆಗೆ ಸಾವಿರಾರು ಜನರು ಸೇರುವುದನ್ನು ರಾಜ್ಯ ಸರ್ಕಾರ ಅಂದಾಜಿಸಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲ್ಲದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ. ಭದ್ರತಾ ವೈಫಲ್ಯದಿಂದಲೇ ಈ ಕಾಲ್ತುಳಿತ ಸಂಭವಿಸಿದೆ.