ಬೆಂಗಳೂರು: ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆರಂಭಿಸುತ್ತಿರುವ ಸರದಿ ನಿರ್ಧಾರ (ಟ್ರಯಾಜ್) ಕೇಂದ್ರಗಳಲ್ಲೂ ಆಮ್ಲಜನಕ ಸಾಂದ್ರಕಗಳನ್ನು ಬಳಸಿ ತುರ್ತು ಅಗತ್ಯ ಇರುವವರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕೆಂಗೇರಿ ಉಪ ನಗರದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆರಂಭಿಸಿರುವ ಟ್ರಯಾಜ್ ಕೇಂದ್ರವನ್ನು ಸೋಮವಾರ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ‘ಟ್ರಯಾಜ್ ಕೇಂದ್ರಗಳಿಗೆ ಬರುವ ಕೋವಿಡ್ ರೋಗಿಗಳ ಆರೋಗ್ಯದ ಸ್ಥಿತಿಯನ್ನು ಅಲ್ಲಿರುವ ವೈದ್ಯರು ಮೌಲ್ಯಮಾಪನ ನಡೆಸುತ್ತಾರೆ. ತುರ್ತು ಅಗತ್ಯ ಇರುವವರಿಗೆ ಅಲ್ಲಿಯೇ ಆಮ್ಲಜನಕದ ಪೂರೈಕೆ ಮಾಡಲಾಗುವುದು’ ಎಂದರು.

ಈ ಕೇಂದ್ರಗಳಲ್ಲಿ ದಿನದ 24 ಗಂಟೆಯೂ ವೈದ್ಯರು ಲಭ್ಯರಿರುತ್ತಾರೆ. ಅವರು ತಜ್ಞ ವೈದ್ಯರ ಜತೆ ಸಂಪರ್ಕದಲ್ಲಿದ್ದು, ಅಗತ್ಯ ಸಲಹೆಗಳನ್ನು ಪಡೆಯುತ್ತಿರುತ್ತಾರೆ. ವೈದ್ಯಕೀಯ ಉಪಕರಣಗಳು ಮತ್ತು ಔಷಧಿಗಳನ್ನೂ ಟ್ರಯಾಜ್ ಕೇಂದ್ರಗಳಿಗೆ ಪೂರೈಸಲಾಗುವುದು ಎಂದು ಹೇಳಿದರು.

ಟ್ರಯಾಜ್ ಕೇಂದ್ರಗಳಿಗೆ ಹೊಂದಿಕೊಂಡಂತೆ ಆಂಬುಲೆನ್ಸ್ ಇರಿಸಲಾಗುವುದು. ಅಲ್ಲಿಗೆ ಬರುವ ರೋಗಿಗಳನ್ನು ಪರೀಕ್ಷಿಸುವ ವೈದ್ಯರು, ಆಸ್ಪತ್ರೆಗೆ ದಾಖಲಿಸುವುದು, ಕೋವಿಡ್ ಆರೈಕೆ ಕೇಂದ್ರಕ್ಕೆ ಕಳಿಸುವುದು ಅಥವಾ ಮನೆಯಲ್ಲೇ ಪ್ರತ್ಯೇಕವಾಸದಲ್ಲಿ ಇರಿಸುವ ಕುರಿತು ತೀರ್ಮಾನಿಸುತ್ತಾರೆ. ಬಳಿಕ ಅಲ್ಲಿಂದಲೇ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗುವುದು. ಮನೆಯಲ್ಲೇ ಪ್ರತ್ಯೇಕವಾಸದಲ್ಲಿ ಇರುವವರಿಗೆ ಟ್ರಯಾಜ್ ಕೇಂದ್ರಗಳ ಮೂಲಕವೇ ಔಷಧಿ ತಲುಪಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.