ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ತಕ್ಷಣವೇ ಆಮ್ಲಜನಕ ಪೂರೈಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

‘ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಮೃತಪಟ್ಟಿದ್ದಾರೆ. ಕಲಬುರ್ಗಿಯಲ್ಲೂ ಆಮ್ಲಜನಕದ ಕೊರತೆಯಿಂದ ಸಾವುಗಳು ಸಂಭವಿಸಿವೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದ ಬಿಕ್ಕಟ್ಟಿನ ಸನ್ನಿವೇಶ ಸೃಷ್ಟಿಯಾಗಿದೆ. ತುಮಕೂರು, ಬೆಳಗಾವಿ, ಧಾರವಾಡ, ಹಾಸನ ಜಿಲ್ಲೆಗಳಲ್ಲೂ ಬಿಕ್ಕಟ್ಟು ಸೃಷ್ಟಿಯಾಗುವ ಲಕ್ಷಣಗಳಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಪೂರ್ಣ ಪ್ರಮಾಣದಲ್ಲಿ ಇಲ್ಲಿಯೇ ಬಳಸಲು ಅವಕಾಶ ನೀಡಿದರೆ ಸಮಸ್ಯೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ನಿಡಿದ್ದಾರೆ. ಆದರೆ, ಬೇಡಿಕೆ ಹೆಚ್ಚುತ್ತಲೇ ಇದೆ. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲೇಬೇಕಿದೆ. ಆದ್ದರಿಂದ ನೀವು ತಕ್ಷಣ ಮಧ್ಯ ಪ್ರವೇಶಿಸಬೇಕು’ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.