ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ | ಬೈಕ್‌ಗೆ ಭತ್ತ ಕಟಾವು ಯಂತ್ರ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

Published 15 ಜನವರಿ 2024, 7:44 IST
Last Updated 15 ಜನವರಿ 2024, 7:44 IST
ಅಕ್ಷರ ಗಾತ್ರ

ಕೊಳ್ಳೇಗಾಲ (ಚಾಮರಾಜನಗರ): ತಾಲ್ಲೂಕಿನ ಜಿನಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಭತ್ತ ಕಟಾವು ಯಂತ್ರವು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಪಾಳ್ಯ ಗ್ರಾಮದ ಸಂತೋಷ್ (32), ಅವರ ಪತ್ನಿ ಸೌಮ್ಯ (27), ಮಗಳು ನಿತ್ಯ ಸಾಕ್ಷಿ (4), ಮಗ ಅಭಿಷೇಕ್ (9) ಮೃತ ಪಟ್ಟವರು.

ಸಂಕ್ರಾಂತಿ ಹಬ್ಬಕ್ಕೆ ಬಟ್ಟೆ ಖರೀದಿಸುವ ಸಲುವಾಗಿ ಸಂತೋಷ್ ಅವರು ಕುಟುಂಬ ಸಮೇತರಾಗಿ ಬೈಕ್‌ನಲ್ಲಿ ಕೊಳ್ಳೇಗಾಲಕ್ಕೆ ಬರುತ್ತಿದ್ದರು. ಈ ವೇಳೆ, ಜಿನಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಭತ್ತ ಕಟಾವು ಮಾಡುವ ಯಂತ್ರವು ಬೈಕ್‌ಗೆ ಡಿಕ್ಕಿ ಹೊಡೆಯಿತು. ಯಂತ್ರವು 30 ಮೀಟರ್ ದೂರಕ್ಕೆ ಬೈಕ್‌ನಲ್ಲಿದ್ದವರನ್ನು ಎಳೆದುಕೊಂಡು ಹೋಗಿದೆ. ದಾರಿಯಲ್ಲಿ ಬರುತ್ತಿದ್ದ ವಾಹನ ಸವಾರರು ಕೂಗಿಕೊಂಡಾಗ ಕಟಾವು ಯಂತ್ರವನ್ನು ನಿಲ್ಲಿಸಿದ ಚಾಲಕ, ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾದರು.

ಮೂವರು ಸ್ಥಳದಲ್ಲೇ ಮೃತಪಟ್ಟರು. ಆದರೆ ಬಾಲಕ ಅಭಿಷೇಕ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಚಾಲಕನ ಅಜಾಗರೂಕತೆಯಿಂದ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರಕ್ಕೆ ತಂದಿದ್ದಾರೆ. ಶವಾಗಾರದ ಮುಂದೆ ಗ್ರಾಮಸ್ಥರು ಜಮಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT