ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ.… pic.twitter.com/b5cECGYw4f
— Narendra Modi (@narendramodi) December 17, 2024
ಲಕ್ಷಾಂತರ ಗಿಡಗಳನ್ನು ನೆಟ್ಟು, ನೀರೆರೆದ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ಪರಿಸರಪ್ರೇಮಿ ತುಳಸಿಗೌಡ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಜೀವನ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ್ದ ತುಳಸಿಗೌಡ ಅವರು ನಿವೃತ್ತಿಯ ನಂತರವೂ ತಮ್ಮ ಪರಿಸರ ಕಾಳಜಿಯಿಂದ ವಿಮುಖರಾಗದೆ ಗಿಡನೆಡುವುದನ್ನು ಮುಂದುವರೆಸಿ, ಪದ್ಮಶ್ರೀಯಂತಹ… pic.twitter.com/JygzlvZ8L2
— Siddaramaiah (@siddaramaiah) December 16, 2024
ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸಿದ ಮಹಾತಾಯಿ, ವೃಕ್ಷಮಾತೆ ಎಂದೇ ಗುರುತಿಸಿಕೊಂಡಿದ್ದ ಪದ್ಮಶ್ರೀ ಪುರಸ್ಕೃತೆ ಶ್ರೀಮತಿ ತುಳಸಿ ಗೌಡ ಅವರ ನಿಧನದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಶಿಕ್ಷಿತರಲ್ಲದಿದ್ದರೂ ಪ್ರಕೃತಿಯ ವಿಶ್ವಕೋಶದಂತೆ ಅವರು ಬದುಕಿದರು. ಲಕ್ಷಾಂತರ ಗಿಡಗಳನ್ನು ನೆಟ್ಟು ಪೋಷಿಸುವ ಜೊತೆಗೆ ಅಳಿವಿನಂಚಿನಲ್ಲಿರುವ… pic.twitter.com/vNoyj3jYfB
— DK Shivakumar (@DKShivakumar) December 17, 2024
ಪದ್ಮಶ್ರೀ ಪುರಸ್ಕೃತರು, ಪರಿಸರ ಪ್ರೇಮಿ "ವೃಕ್ಷಮಾತೆ" ತುಳಸಿ ಗೌಡ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖಿತನಾಗಿದ್ದೇನೆ.
— Basavaraj S Bommai (@BSBommai) December 16, 2024
ದೇವರು ಅವರಬಆತ್ಮಕ್ಕೆ ಚಿರಶಾಂತಿ ನೀಡಿ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ pic.twitter.com/oQdVBZ81Sr
ಪದ್ಮಶ್ರೀ ಪುರಸ್ಕೃತೆ ಪರಿಸರದ ಗಟ್ಟಿ ಧ್ವನಿ ತುಳಸಿ ಗೌಡ ಅವರು ಇನ್ನಿಲ್ಲವಾಗಿರುವುದು ನಿಜಕ್ಕೂ ಪರಿಸರ ಕಾಳಜಿಯ ಮನಸ್ಸುಗಳಿಗೆ ಆಘಾತ ತಂದಿದೆ. ಅವರ ಅಗಲಿಕೆಗೆ ತೀವ್ರ ಸಂತಾಪ ಕೋರುತ್ತೇನೆ.
— Vijayendra Yediyurappa (@BYVijayendra) December 16, 2024
ಹಸಿರು ಕ್ರಾಂತಿಯ ಮೂಲಕ ಪರಿಸರ ಉಳಿಸುವ ನಿಟ್ಟಿನಲ್ಲಿ ಅವರ ಅಹರ್ನಿಶಿ ಕಾಳಜಿಯನ್ನು ಹಾಗೂ ಪರಿಸರ ಕ್ರಾಂತಿಯನ್ನು ಗೌರವಿಸಿ ನಮ್ಮ ಕೇಂದ್ರ ಸರ್ಕಾರ ಕಳೆದ… pic.twitter.com/d5wM4AMR4t
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.