ಬೆಂಗಳೂರು: ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ರಾಜ್ಯದ ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಹಾಗೂ ಮಧುಸೂದನ್ ರಾವ್ (ತೆಲಂಗಾಣ ಮೂಲ) ಉಗ್ರರ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಈ ಘಟನೆಯಲ್ಲಿ 26 ಜನ ಮೃತಪಟ್ಟು, 17 ಜನ ಗಾಯಗೊಂಡಿದ್ದಾರೆ. ಕೃತ್ಯ ಎಸಗಿದವರ ಸದೆಬಡಿಯಲು ಸೇನೆ ಕಾರ್ಯಾಚರಣೆ ಆರಂಭಿಸಿದೆ.
.Pahalgam Terror Attack: ಉಗ್ರರ ದಾಳಿ ಕೈವಾಡ ನಿರಾಕರಿಸಿದ ಪಾಕ್.Pahalgam Terror Attack: 5.5 ಲಕ್ಷ ಮಸೀದಿಗಳಿಂದ ಭಯೋತ್ಪಾದಕರಿಗೆ ಕಟು ಸಂದೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.