ಬಾಗಲಕೋಟೆ: ಪಂಚಮಸಾಲಿ ಮೀಸಲಾತಿ ಬಗ್ಗೆ ಸಂಪುಟದಲ್ಲಿ ಚರ್ಚಿಸಿ, ನಂತರ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಹುನಗುಂದದಲ್ಲಿ ಮೀಸಲಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ ಅವರು, ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನವರು ಅನವಶ್ಯಕ ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಭರವಸೆಗಳು ಮಾತನಾಡಬಾರದು. ಕೆಲಸಗಳು ಮಾತನಾಡಬೇಕು. ಬೋಗಸ್ ಗ್ಯಾರಂಟಿ ಕಾರ್ಡ್ ನೀಡಿ ಜನರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ರಾಜಸ್ಥಾನ, ಛತ್ತೀಸಗಡದಲ್ಲಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೆ ಈಡೇರಿಸಿಲ್ಲ. ಕರ್ನಾಟಕದ ಜನರು ಪ್ರಬುದ್ಧರಿದ್ದಾರೆ ಎಂದರು.

ಹಲಕುರ್ಕಿ ರೈತರ ಭೂಸ್ವಾಧೀನ ಕುರಿತು ಪ್ರತಿಕ್ರಿಯಿಸಿ, ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.