ಬೆಂಗಳೂರು: ‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಜಾತಿ, ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ಬೇಡಿಕೆಗಳನ್ನು ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕು‘ ಎಂಬ ಮಧ್ಯಂತರ ಮನವಿಗೆ ನೀಡಲಾಗಿದ್ದ ತಡೆ ಮತ್ತು ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು ಎಂಬ ಆದೇಶವನ್ನು ಹೈಕೋರ್ಟ್ ತೆರವು ಮಾಡಿದೆ.

ಈ ಸಂಬಂಧ ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ವಿಶೇಷವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ 2023ರ ಜನವರಿ 12ರಂದು ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿತು.

‘ಸರ್ಕಾರವು, 2–ಎ ಮೀಸಲಾತಿಗೆ ತೊಂದರೆಯಾಗುವಂತಹ ಯಾವುದೇ ಕಾರ್ಯಕ್ಕೆ ಮುಂದಾಗುವುದಿಲ್ಲ. ಪ್ರವರ್ಗ 2–ಎಗೆ ಲಭ್ಯವಿರುವ ಮೀಸಲಾತಿಗೆ ಅಡ್ಡಿ ಉಂಟುಮಾಡುವ ಉದ್ದೇಶವನ್ನು ಸರ್ಕಾರ ಹೊಂದಿಲ್ಲ. ಆದಾಗ್ಯೂ, ಈ ಪ್ರಕರಣದಲ್ಲಿ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರದಿಂದ ಪ್ರವರ್ಗ 2–ಎ ಅಡಿಯಲ್ಲಿನ ಮೀಸಲಾತಿಯ ಪ್ರಮಾಣದಲ್ಲಿ ಬದಲಾವಣೆ ಮಾಡುವುದಿಲ್ಲ’ ಎಂದು ವಾಗ್ದಾನ ನೀಡಿದರು. ನಂತರ, ಈ ಕುರಿತಂತೆ ನ್ಯಾಯಾಲಯಕ್ಕೆ ಲಿಖಿತ ಮುಚ್ಚಳಿಕೆ ಸಲ್ಲಿಸಿದರು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಎಚ್.ವಿ.ಮಂಜುನಾಥ್ ಸರ್ಕಾರದ ಮನವಿಗೆ ಬಲವಾದ ಆಕ್ಷೇಪಣೆ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಮೀಸಲಾತಿ ಕಲ್ಪಿಸುವ ಸಂಬಂಧ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರವು ಈ ಅರ್ಜಿಯ ಕುರಿತಂತೆ ಅರ್ಜಿ ಮೇಲಿನ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ’ ಎಂದು ಸ್ಪಷ್ಟಪಡಿಸಿತು.

ಆಕ್ಷೇಪಣೆ ಏನಿತ್ತು?:

ರಾಜ್ಯ ಸರ್ಕಾರ ಈ ಹಿಂದೆ ನ್ಯಾಯಪೀಠಕ್ಕೆ ಸಲ್ಲಿಸಿದ್ದ ಆಕ್ಷೇಪಣೆಯಲ್ಲಿ, ‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ-1995ರ ಕಲಂ 9ರ ಪ್ರಕಾರ ಯಾವುದಾದರೂ ಒಂದು ಸಮುದಾಯ ತಮ್ಮನ್ನು ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಮನವಿ ಸಲ್ಲಿಸಿದರೆ, ಅದನ್ನು ಪರಿಶೀಲಿಸುವುದಕ್ಕೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಅವಕಾಶವಿದೆ. ಮನವಿ ಮಾಡಿದ ಸಮುದಾಯಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿವೆಯೇ ಎಂಬ ಬಗ್ಗೆ ವಿಚಾರಣೆ, ಸಮೀಕ್ಷೆ, ತನಿಖೆ ನಡೆಸಿ ವರ್ಗೀಕರಣದ ಬಗ್ಗೆ ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡಬೇಕಾಗುತ್ತದೆ. ಕಲಂ 11ರ ಪ್ರಕಾರ, ಸರ್ಕಾರವು ಆಯೋಗದೊಂದಿಗೆ ಸಮಾಲೋಚನೆ ನಡೆಸಿ, ಪ್ರತಿ 10 ವರ್ಷಗಳಿಗೊಮ್ಮೆ ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಅವಕಾಶವಿದೆ. ಇದು ನಿರಂತರ ಪ್ರಕ್ರಿಯೆ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿತ್ತು.

ಅರ್ಜಿದಾರರ ಕೋರಿಕೆ:

‘ನಾನು ದೇವಾಡಿಗ ಸಮುದಾಯಕ್ಕೆ ಸೇರಿದವನಾಗಿದ್ದು ಹಿಂದುಳಿದ ವರ್ಗಗಳಿಗೆ ದೊರೆಯುವ 2-ಎ ಮೀಸಲಾತಿಯ ಫಲಾನುಭವಿಯಾಗಿದ್ದೇನೆ. ಇತ್ತೀಚೆಗೆ ಲಿಂಗಾಯತ-ವೀರಶೈವ ಪಂಚಮಸಾಲಿ ಸಮುದಾಯದವರು ತಮ್ಮನ್ನು ಪ್ರವರ್ಗ 2-ಎಗೆ ಸೇರಿಸಬೇಕು ಎಂಬ ಬೇಡಿಕೆಯನ್ನು ಮಂಡಿಸಿದ್ದಾರೆ. ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಂಚಮಸಾಲಿ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡುವುದನ್ನು ಖಚಿತಪಡಿಸಿದ್ದು ಅದಕ್ಕಾಗಿ 2022ರ ಡಿಸೆಂಬರ್ 29ರ ಗಡುವು ನೀಡಿದ್ದರು. ಒಂದು ವೇಳೆ ಈ ಬಲಾಢ್ಯ ಹಾಗೂ ಮುಂದುವರಿದ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡಿದರೆ ಹಿಂದುಳಿದ ವರ್ಗಗಳಿಗೆ ಭರಿಸಲಾಗದ ಅನ್ಯಾಯ ಉಂಟಾಗಲಿದೆ. ಹಾಗಾಗಿ, ಈ ಅರ್ಜಿ ಇತ್ಯರ್ಥವಾಗುವತನಕ ಮೀಸಲು ಪ್ರವರ್ಗಗಳನ್ನು ಮಾರ್ಪಾಡು ಮಾಡುವಂತೆ ಕೋರುವ ಬೇಡಿಕೆಗಳನ್ನು ಸರ್ಕಾರ ಪ್ರೋತ್ಸಾಹಿಸದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.