ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರದ ವಿಳಂಬ ನೀತಿಯಿಂದಾಗಿ ವಿದ್ಯಾರ್ಥಿಗಳಿಗೆ ಒಂದೂವರೆ ತಿಂಗಳ ಕಲಿಕಾ ಅವಧಿಯೇ ನಷ್ಟವಾಗಿದೆ. ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ಕೆಲವು ವಿದ್ಯಾರ್ಥಿಗಳು ನಿರ್ದಿಷ್ಟ ಕಾಲೇಜಿನಲ್ಲಿ ಸೀಟು ಸಿಗಬಹುದು ಎಂಬ ನಿರೀಕ್ಷೆಯಿಂದ ಭಾಗಶಃ ಶುಲ್ಕ ಪಾವತಿಸಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಅದೇ ಕಾಲೇಜಿನಲ್ಲಿ ಸೀಟು ಖಚಿತವಾಗದಿದ್ದರೆ ಅವರು ಶುಲ್ಕವನ್ನು ಕಳೆದುಕೊಳ್ಳಬೇಕಾಗುತ್ತದೆ. ಸಾಲ ಮಾಡಿ ಮಕ್ಕಳ ಶುಲ್ಕ ಹೊಂದಿಸಿದ ಪೋಷಕರೂ ಇದರಿಂದ ಕಳವಳಗೊಂಡಿದ್ದಾರೆ’ ಎಂದರು.