ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾನಾಂತರ ಪರೀಕ್ಷಾ ವೇಳಾಪಟ್ಟಿ: ಡಾ.ಸುಧಾಕರ್

ಸಮಾನಾಂತರ ಪರೀಕ್ಷಾ ವೇಳಾಪಟ್ಟಿ: ಡಾ.ಸುಧಾಕರ್
Published 28 ಸೆಪ್ಟೆಂಬರ್ 2023, 0:04 IST
Last Updated 28 ಸೆಪ್ಟೆಂಬರ್ 2023, 0:04 IST
ಅಕ್ಷರ ಗಾತ್ರ

ಅರಸೀಕೆರೆ: ‘ಇಡೀ ರಾಜ್ಯದಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಸಮಾನಾಂತರವಾಗಿ ತರಬೇಕು ಎಂದು ನಿರ್ಧರಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ’ಕೋವಿಡ್‌–19 ನಂತರ ಪರೀಕ್ಷಾ ವೇಳಾಪಟ್ಟಿ ಏರುಪೇರಾಗಿದೆ. ಅತಿಥಿ ಉಪನ್ಯಾಸಕರ ನೇಮಕ ಹಾಗೂ ವರ್ಗಾವಣೆಯಿಂದ ಸಮಸ್ಯೆಯಾಗುತ್ತಿದೆ’ ಎಂದರು.

‘ರಾಜ್ಯದಲ್ಲಿ ಹಲವು ವಿಶ್ವವಿದ್ಯಾಲಯಗಳಿದ್ದರೂ, ಕಡೇ ಕ್ಷಣದಲ್ಲಿ ತಲಾ ₹ 2 ಕೋಟಿ ಅನುದಾನ ನೀಡಿ, ಬಿಜೆಪಿ ಸರ್ಕಾರ 7 ವಿಶ್ವವಿದ್ಯಾಲಯಗಳನ್ನು ಆರಂಭಿಸಿತ್ತು. ಎಲ್ಲ ವಿಶ್ವವಿದ್ಯಾಲಯಗಳ ಮುಖ್ಯಸ್ಥರನ್ನು ಕರೆದು ಸಭೆ ನಡೆಸಲಾಗಿದೆ. ಕೂಲಂಕಷ ಅಧ್ಯಯನ ನಡೆದಿದೆ. ಆದರೆ ಹೊಸ ವಿಶ್ವವಿದ್ಯಾಲಯಗಳನ್ನು ರದ್ದು ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT