ಪದಕಗಳ ಸಾಧನೆ
2017 ಮತ್ತು 2018ರಲ್ಲಿ ಬರ್ಲಿನ್‌ನಲ್ಲಿ ನಡೆದ ಪ್ಯಾರಾ ಒಲಿಂಪಿಕ್‌ನಲ್ಲಿ ಕಂಚಿನ ಪದಕ, 2016ರಲ್ಲಿ ಕೆನಡಾದ ಒಟ್ಟಾವಾದಲ್ಲಿ ನಡೆದ ಅಂತರರಾಷ್ಟ್ರೀಯ ಪ್ಯಾರಾ-ಈಜು ಚಾಂಪಿಯನ್‌ಶಿಪ್‌ನಲ್ಲಿ 2 ಬೆಳ್ಳಿ ಮತ್ತು 1 ಕಂಚಿನ ಪದಕ, 2017ರಲ್ಲಿ ಉದಯಪುರದಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ-ಈಜು ಸ್ಪರ್ಧೆಯಲ್ಲಿ 1 ಚಿನ್ನ ಮತ್ತು 2 ಬೆಳ್ಳಿ ಪದಕಗಳು ಮತ್ತು 2018ರಲ್ಲಿ ಬೆಂಗಳೂರಿನಲ್ಲಿ ನಡೆದ ಭಾರತೀಯ ಮುಕ್ತ ಈಜು ಸ್ಪರ್ಧೆಯಲ್ಲಿ 5 ಚಿನ್ನದ ಪದಕಗಳೂ ಸೇರಿದಂತೆ ವಿವಿಧ ಸ್ತರಗಳ ಸ್ಪರ್ಧೆಗಳಲ್ಲಿ ವಿಶ್ವಾಸ್ ಪದಕಗಳ ಸರಮಾಲೆಯನ್ನೇ ತಮ್ಮ ಕೊರಳಿಗೆ ಹಾಕಿಕೊಂಡಿದ್ದಾರೆ.