ಬೆಂಗಳೂರು: ಶರಣಾದ ನಕ್ಸಲರು ತಮ್ಮ ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರೇ ಪತ್ತೆ ಹಚ್ಚಲಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಇಟ್ಟಿದ್ದಾರೆ ಎಂಬುದನ್ನು ನೆರವು ಪಡೆದು ಪೊಲೀಸರು ಹುಡುಕುತ್ತಾರೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರವೇ ಕೆಲಸ ಮಾಡುತ್ತಾರೆ’ ಎಂದು ಹೇಳಿದರು.

ಇವೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲದ ಸಂಗತಿಯೇನಲ್ಲ. ಅವರೂ ಕೂಡ ಸರ್ಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ ಎಂದು ಪರಮೇಶ್ವರ ತಿರುಗೇಟು ನೀಡಿದರು.

ನಕ್ಸಲ್ ರವೀಂದ್ರ ಎಂಬಾತನ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರ ಹಾಕಿದ್ದರು ಎಂಬುದು ಗೊತ್ತಿಲ್ಲ. ತನಿಖೆ ನಡೆದಿದೆ. ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಯಾದರೂ ಬಂದರೆ ಪೊಲೀಸರು ನಿಗಾವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಎನ್ಕೌಂಟರ್ನಲ್ಲಿ ಮೃತಪಟ್ಟ ನಕ್ಸಲ್ ವಿಕ್ರಮ್ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಾಗುವುದು. ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ಗೌಡ ಪ್ರಕರಣಗಳೇ ಬೇರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.