ಬೆಂಗಳೂರು: ಹೈಕಮಾಂಡ್ನವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದು ಸುಮಾರು 4 ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಮ್ಮುಖದಲ್ಲಿ ಸಭೆ ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಏನು ಮಾತುಕತೆಯಾಯಿತು ಎಂಬುವುದು ನನಗೆ ಗೊತ್ತಿಲ್ಲ, ಮಾಧ್ಯಮಗಳಲ್ಲಿ ಹಲವು ವದಂತಿಗಳು ಬರುತ್ತಿವೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು , ಅವರೇ ಎಲ್ಲದಕ್ಕೂ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯಸಭೆ ಮತ್ತು ಕೌನ್ಸಿಲ್ಗೆ ನೇಮಕಾತಿ ಬಗ್ಗೆ ಚರ್ಚೆ ಮಾಡಿರುವುದಾಗಿ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಅದಷ್ಟೇ ನನಗೆ ಗೊತ್ತು. ಸಿದ್ದರಾಮಯ್ಯ ಅವರು ನನ್ನ ಜೊತೆ ಏನನ್ನೂ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನೀವು ಸಿಎಂ ಹುದ್ದೆಗೆ ಬೇಡಿಕೆ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವೆಲ್ಲ ಅಪ್ರಸ್ತುತ. ಅದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ. ನಾನು ಯಾರನ್ನೂ ಭೇಟಿ ಮಾಡಿಲ್ಲ. ಅಲ್ಲಿ ಏನು ಚರ್ಚೆಯಾಯಿತು ಎಂಬ ಬಗ್ಗೆ ನನಗೆ ತಿಳಿದಿಲ್ದ ಎಂದಿದ್ದಾರೆ.

ಉಪಹಾರ ಕೂಟದ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರು ಹಲವು ಬಾರಿ ಸಚಿವರನ್ನು ಉಪಹಾರ ಕೂಟಕ್ಕೆ ಕರೆದಿದ್ದಾರೆ. ಅದರಂತೆ ನಾಳೆ ಕೂಡ ಸೌಹಾರ್ದಯುತವಾಗಿ ಕರೆದಿದ್ದಾರೆ, ಅದರಲ್ಲೇನೂ ವಿಶೇಷತೆ ಇಲ್ಲ ಎಂದು ಹೇಳಿದ್ದಾರೆ.
.ನಾಳೆ ಎಲ್ಲವನ್ನೂ ಮಾತಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.